ಜಮ್ಮು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಡಿಎಸ್‌ಪಿ ಹುಮಾಯೂನ್ ಮುಜಾಮ್ಮಿಲ್ ಅಂತ್ಯಕ್ರಿಯೆ - ಉಪ ಪೊಲೀಸ್ ವರಿಷ್ಠಾಧಿಕಾರಿ
Published : Sep 14, 2023, 8:40 AM IST
ಜಮ್ಮು ಮತ್ತು ಕಾಶ್ಮೀರ : ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ನಿನ್ನೆ (ಬುಧವಾರ) ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಪ್ರಾಣ ಕಳೆದುಕೊಂಡ ಡಿಎಸ್‌ಪಿ ಹುಮಾಯೂನ್ ಮುಜಾಮ್ಮಿಲ್ ಭಟ್ ಅವರ ಅಂತಿಮ ವಿಧಿ-ವಿಧಾನಗಳನ್ನು ಬುಡ್ಗಾಮ್‌ನಲ್ಲಿ ಕಳೆದ ರಾತ್ರಿ ನೆರವೇರಿಸಲಾಯಿತು.
ಉಗ್ರ ನಿಗ್ರಹ ಕಾರ್ಯಾಚರಣೆ ಎನ್‌ಕೌಂಟರ್‌ನಲ್ಲಿ ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದ ಮೇಜರ್ ಶ್ರೇಣಿಯ ಇಬ್ಬರು ಅಧಿಕಾರಿಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕರು ಹುತಾತ್ಮರಾಗಿದ್ದರು. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹುಮಾಯೂನ್ ಮುಜಾಮ್ಮಿಲ್ ಭಟ್ ಗುಂಡೇಟಿಗೆ ಬಲಿಯಾಗಿದ್ದರು.
ಅನಂತನಾಗ್‌ನ ಕೋಕರ್‌ನಾಗ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯ ನಡುವೆ ಪೊಲೀಸ್ ಅಧಿಕಾರಿಯ ಮೃತದೇಹವನ್ನು ಹೊರತೆಗೆಯಲಾಗಿತ್ತು. ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಕೂಡ ಹತರಾಗಿದ್ದರು.
ಇದನ್ನೂ ಓದಿ :ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾ ಹತ್ಯೆ ಯಲ್ಲಿ ಭಾಗಿಯಾಗಿದ್ದ ಉಗ್ರ ಹತ : ಪೊಲೀಸ್ ಇಲಾಖೆ