NIA ದಾಳಿ ಖಂಡಿಸಿ ಪ್ರತಿಭಟನೆ: PFI ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಉಡುಪಿ ಪೊಲೀಸರು - PFI ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಎನ್‌ಐಎ ತನಿಖೆ ವಿರುದ್ಧ ಯಾವುದೇ ಮಾಹಿತಿ ಇಲ್ಲದೇ ಪ್ರತಿಭಟನೆ ನಡೆಸಿದ ಪಿಎಫ್ಐ ಕಾರ್ಯಕರ್ತರಿಗೆ ಉಡುಪಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ತರಾತುರಿಯಲ್ಲಿ ಎನ್‌ಐಎ ದಾಳಿ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಪಿಎಫ್ಐ ಕಾರ್ಯಕರ್ತರಿಂದಾಗಿ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತತೆ ಉಂಟಾಗಿತ್ತು. ಅನುಮತಿ ಪಡೆಯದೇ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ PFI ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು. ಖಾಕಿ ಎಚ್ಚರಿಕೆಗೆ ಕಿವಿಗೊಡದ PFI ಕಾರ್ಯಕರ್ತರಿಗೆ ಕೊನೆಗೂ ಪೊಲೀಸರು ಲಾಠಿ ರುಚಿ ತೋರಿಸಲೇಬೇಕಾಯಿತು. ಈ ವೇಳೆ ಹಲವು PFI ಕಾರ್ಯಕರ್ತರನ್ನು ವಶಕ್ಕೆ ಪಡೆದ ಸಿಬ್ಬಂದಿ ತನಿಖೆಗೊಳಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Last Updated : Feb 3, 2023, 8:28 PM IST