ಮಹಿಳಾ ವಕೀಲೆಗೆ ಅನುಚಿತ ವರ್ತನೆ ಆರೋಪ: ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ - ಮಹಿಳಾ ವಕೀಲೆಗೆ ಅನುಚಿತ ವರ್ತನೆ ಆರೋಪ
ಹುಬ್ಬಳ್ಳಿ: ಧಾರವಾಡದ ಮಹಿಳಾ ವಕೀಲರ ಜೊತೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆ ಸಿಪಿಐ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ವಿದ್ಯಾನಗರದ ಕೋರ್ಟ್ ಆವರಣದಲ್ಲಿ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ವಕೀಲರು ಸಿಪಿಐ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು. ಧಾರವಾಡ ಗ್ರಾಮೀಣ ಪೋಲಿಸ್ ಠಾಣೆ ಸಿಪಿಐ ಮಂಜುನಾಥ್ ಕುಸುಗಲ್ ಮಹಿಳಾ ವಕೀಲರ ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಕೂಡಲೇ ಪೊಲೀಸ್ ಅಧಿಕಾರಿ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕು ಎಂದು ಒತ್ತಾಯಿಸಿದರು.
Last Updated : Feb 3, 2023, 8:31 PM IST