ಕರ್ನಾಟಕ

karnataka

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಲಕ್ಷ್ಮಣ ಸವದಿ

ETV Bharat / videos

ರಸ್ತೆ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಲಕ್ಷ್ಮಣ ಸವದಿ - ರಸ್ತೆ ಅಪಘಾತ

By

Published : Mar 1, 2023, 12:34 PM IST

ಚಿಕ್ಕೋಡಿ(ಬೆಳಗಾವಿ):  ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲು ಸಹಾಯ ಮಾಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸಮೀಪದ ಗೋಕಾಕ್-ಅಥಣಿ ರಸ್ತೆಯಲ್ಲಿ ತಡರಾತ್ರಿ ಅಪರಿಚಿತ ವಾಹನ ಬೈಕ್ ಸವಾರಿಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಅಡಹಳಟ್ಟಿ ಗ್ರಾಮದ ಓರ್ವರು ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಲಕ್ಷ್ಮಣ ಸವದಿ ಆಗಮಿಸುತ್ತಿದ್ದರು. ಗಾಯಗೊಂಡ ವ್ಯಕ್ತಿಯನ್ನು ನೋಡಿ ಘಟನಾ ಸ್ಥಳಕ್ಕೆ ಆಗಮಿಸಿದ ಅವರು ಆ್ಯಂಬುಲೆನ್ಸ್​​ಗೆ ಕರೆ ಮಾಡಿದ್ದಾರೆ. ಆರೋಗ್ಯ ಸಂಚಾರಿ ವಾಹನ ಬರುವವರಿಗೆ ಕಾದು ನಿಂತು ಅಥಣಿ ಸಮುದಾಯ ಆಸ್ಪತ್ರೆಗೆ ಗಾಯಾಳುವನ್ನು ರವಾನಿಸಿದ್ದಾರೆ. ಸವದಿ ಅವರು ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ:ಸತೀಶ್ ಬೆಂಬಲಿಗರಿಂದ ಘೇರಾವ್​​: ಬೆಳಗಾವಿಯಲ್ಲಿ ಲಕ್ಷ್ಮಣ ಸವದಿ ಬಣದಿಂದ ಗೌಪ್ಯ ಸಭೆ..!

ABOUT THE AUTHOR

...view details