ವಿಡಿಯೋ: ಕಾಜಿರಂಗ ಉದ್ಯಾನವನದ ರಸ್ತೆಯಲ್ಲಿ ಸೈಕಲ್ ಸವಾರನ ಮೇಲೆರಗಿದ ಚಿರತೆ! - attack on video
ಅಸ್ಸೋಂ: ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಹಲ್ಧಿಬರಿ ಪ್ರದೇಶದಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ಮಾಡಿದೆ. ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರಾದರು. ಈ ಪ್ರದೇಶದಲ್ಲಿ ಚಿರತೆಗಳ ಓಡಾಟ ನಡೆಯುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಯಾಣಿಕರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ಈ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸದಂತೆ ಹಾಗು ಎಚ್ಚರಿಕೆಯಿಂದ ಪ್ರಯಾಣಿಸುವಂತೆಯೂ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
Last Updated : Feb 3, 2023, 8:23 PM IST