ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಬದನೆಕುಪ್ಪೆ ಗ್ರಾಮಸ್ಥರು - ಜಾನುವಾರು ಗಳನ್ನು ತಿಂದು ಪರಾರಿ
ಮೈಸೂರು: ಮೂರು ತಿಂಗಳಿನಿಂದ ರೈತರ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಅಂತೂ ಬೋನಿಗೆ ಬಿದ್ದಿದೆ. ಈ ಚಿರತೆ ಉಪಟಳಕ್ಕೆ ಬೇಸತ್ತಿದ್ದ ಗ್ರಾಮಸ್ಥರು ಈಗ ನಿಟ್ಟುಸಿರು ಬಿಡುವಂತಾಗಿದೆ. ಎಚ್.ಡಿ.ಕೋಟೆ ತಾಲೂಕು ಬದನಕುಪ್ಪೆ ಗ್ರಾಮದ ಜಮೀನುಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ, ಜಾನುವಾರು ಗಳನ್ನು ತಿಂದು ಪರಾರಿ ಆಗುತ್ತಿತ್ತು. ಜಾನುವಾರುಗಳನ್ನು ಕಳೆದುಕೊಂಡಿದ್ದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಪಟ್ಟು ಹಿಡಿದಿದ್ದರು. ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಬೋನು ಇಟ್ಟಿತ್ತು. ಆಹಾರ ಅರಸಿ ಬಂದ ಚಿರತೆ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದಿರುವ ಚಿರತೆ ನೋಡಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ವಿರುದ್ಧ ಸೆರೆ ಸಿಕ್ಕಿರುವ ಚಿರತೆಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಬಿಟ್ಟಿದ್ದಾರೆ.
Last Updated : Feb 3, 2023, 8:35 PM IST