ಕರ್ನಾಟಕ

karnataka

ಚಿರತೆಗಳು ಪ್ರತ್ಯಕ್ಷ

ETV Bharat / videos

ನೆಲಮಂಗಲದಲ್ಲಿ ಚಿರತೆ ಪತ್ತೆ; ಸಾರ್ವಜನಿಕರಲ್ಲಿ ಆತಂಕ- ವಿಡಿಯೋ

By ETV Bharat Karnataka Team

Published : Nov 1, 2023, 2:05 PM IST

ನೆಲಮಂಗಲ (ಬೆಂಗಳೂರು ಗ್ರಾಮಾಂತರ):ನೆಲಮಂಗಲ ತಾಲೂಕಿನ ಮಾರುತಿನಗರ ಹಾಗು ಇಂದಿರಾನಗರ ಪ್ರದೇಶಗಳಲ್ಲಿ ಚಿರತೆ ಸಂಚಾರದ ಚಲನವಲನ ಪತ್ತೆಯಾಗಿದ್ದು, ಸುತ್ತಮುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ. ಮಾರುತಿ ನಗರ ಗೋದಾಮು ಸಮೀಪ ಮಂಗಳವಾರ ರಾತ್ರಿ 11 ಗಂಟೆಯ ಸಮಯದಲ್ಲಿ ಚಿರತೆ ಓಡಾಡಿದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

ಸಮೀಪವೇ ಇರುವ ಆಲದಹಳ್ಳಿ ಬೆಟ್ಟದಲ್ಲಿ ಚಿರತೆ ವಾಸವಿರುವ ಸಾಧ್ಯತೆ ಇದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಓಡಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ಬೊಮ್ಮನಹಳ್ಳಿಯ ಕೃಷ್ಣಾ ರೆಡ್ಡಿ ಬಡಾವಣೆಯಲ್ಲಿ ರಾತ್ರಿ ಮತ್ತೆ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿವಾಸಿಗಳನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ವಿಷಯ ತಿಳಿದು ಕೂಡಲೇ ಅಲರ್ಟ್ ಆದ ಅರಣ್ಯ ಇಲಾಖೆ ಅಧಿಕಾರಿಗಳು ಥರ್ಮಲ್ ತಂತ್ರಜ್ಞಾನದ ಡ್ರೋಣ್ ಮೂಲಕ ಕಾರ್ಯಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಪಾಳು ಕಟ್ಟಡದಲ್ಲಿ ಚಿರತೆ ಇರುವುದು ಖಾತ್ರಿಯಾಗಿದೆ. ಇಂದು ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.       

ಇದನ್ನೂ ಓದಿ :ಬೆಂಗಳೂರು ಹೊರವಲಯದ ರಸ್ತೆ, ಅಪಾರ್ಟ್​ಮೆಂಟ್​ಗಳಲ್ಲಿ ಚಿರತೆ ಓಡಾಟ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ABOUT THE AUTHOR

...view details