ಖಾನಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು.. - ಆತಂಕದಲ್ಲಿ ಗ್ರಾಮಸ್ಥರು
ಬೆಳಗಾವಿ:ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಜಮೀನೊಂದರಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಜಮೀನಿನಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು, ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆ ಖಾನಟ್ಟಿ ಗ್ರಾಮದ ಜನರಲ್ಲಿ ಭೀತಿ ಹುಟ್ಟಿಕೊಂಡಿದ್ದು, ರೈತರು ತಮ್ಮ ಜಮೀನುಗಳಿಗೆ ತೆರಳಲು ಹಿಂದೇಟು ಹಾಕಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇತ್ತೀಚಿನ ಪ್ರಕರಣ, ಚಿರತೆ ಸೆರೆ:ಬಾಲಕನ ಮೇಲೆ ದಾಳಿ ನಡೆಸಿದ್ದ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಇತ್ತೀಚೆಗೆ ಸೆರೆಯಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕುಂತೂರು ಬೆಟ್ಟದಲ್ಲಿ ಜರುಗಿತ್ತು. ಸೆರೆಯಾದ ಚಿರತೆಗೆ ಅಂದಾಜು 6 ವರ್ಷ ವಯಸ್ಸು ಆಗಿದ್ದು, ಅದು ಗಂಡು ಚಿರತೆ ಆಗಿದೆ. ಮೇಲ್ನೋಟಕ್ಕೆ ಈ ಚಿರತೆ ಆರೋಗ್ಯವಾಗಿರುವಂತೆ ಕಂಡು ಬಂದಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದರು.
ಇದನ್ನೂ ಓದಿ:ಮೈಸೂರಿನಲ್ಲಿ ವೃದ್ಧೆಯ ಮೇಲೆ ಗೂಳಿ ದಾಳಿ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ