ತೋಟದಲ್ಲಿ ಪ್ರತ್ಯಕ್ಷವಾದ ಚಿರತೆ ಕಂಡು ದಿಕ್ಕಾಪಾಲಾಗಿ ಓಡಿದ ರೈತರು: ವಿಡಿಯೋ - Tarbenahalli of Chikkanayakanahalli Taluk
Published : Aug 26, 2023, 7:45 PM IST
ತುಮಕೂರು:ತೋಟ ಹಾಗೂ ಹೊಲಗಳಲ್ಲಿಚಿರತೆ ಪ್ರತ್ಯಕ್ಷವಾಗಿದ್ದರಿಂದ ರೈತರು ದಿಕ್ಕಾಪಾಲಾಗಿ ಓಡಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತರ್ಬೇನಹಳ್ಳಿಯಲ್ಲಿ ಎರಡು ದಿನಗಳ ಹಿಂದೆ ನಡೆದಿದೆ. ಚಿರತೆ ಪ್ರತ್ಯಕ್ಷವಾಗಿದ್ದರಿಂದ ಗ್ರಾಮಸ್ಥರು ಆತಂಕಕೊಂಡಿದ್ದಾರೆ. ತೋಟ ಮತ್ತು ಹೊಲಗಳಲ್ಲಿ ಚಿರತೆ ಸಂಚರಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇಬ್ಬರು ರೈತರು ತೋಟದ ಮನೆಯಿಂದ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಭಯಭೀತರಾದ ರೈತರು ಬೈಕ್ಅನ್ನು ಬಿಟ್ಟು ಓಡಿ ಹೋಗಿ ತೋಟದ ಮನೆಗೆ ಸೇರಿಕೊಳ್ಳುತ್ತಾರೆ. ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೀಗಾಗಿ ಜಾನುವಾರುಗಳ ಜತೆ ಹೊಲ, ತೋಟಕ್ಕೆ ತೆರಳಲು ರೈತರು ಹಿಂದೇಟು ಹಾಕುತ್ತಿದ್ದಾರೆ. ತಕ್ಷಣ ಚಿರತೆಯನ್ನು ಸೆರೆ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಚಿರತೆ ಸೆರೆ:ಇತ್ತೀಚಿಗೆ ಮೈಸೂರಿನ ಕೆ ಆರ್ ನಗರ ತಾಲೂಕಿನ ದೊಡ್ಡವಡ್ಡರಗುಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಕೆಲವು ದಿನಗಳಿಂದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆ ಬಿದ್ದಿತ್ತು. ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಎಂ ಆರ್ ರಶ್ಮಿ ಮತ್ತು ಉಪವಲಯ ಅರಣ್ಯಾಧಿಕಾರಿ ಕುಮಾರ್ ತಂಡ ಶುಕ್ರವಾರ ರಾತ್ರಿಯಿಂದಲೇ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಚಿರತೆ ಕಬ್ಬಿನ ಗದ್ದೆಯಲ್ಲಿ ಬಿಟ್ಟು ಹೋಗಿದ್ದ ಎರಡು ಮರಿಗಳನ್ನು ಮತ್ತು ಕಾಲರ್ ಕ್ಯಾಮರಾವನ್ನು ಸ್ಥಳದಲ್ಲಿಟ್ಟು ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ಚಿರತೆ ಸೆರೆ: ಬನ್ನೇರುಘಟ್ಟಕ್ಕೆ ಶಿಫ್ಟ್