ಅಬಕಾರಿ ನೀತಿ ಹಗರಣ ಪ್ರಕರಣ: ಸಿಸೋಡಿಯಾಗೆ ಜೂನ್ 2ರವರೆಗೆ ನ್ಯಾಯಾಂಗ ಬಂಧನ
ನವದೆಹಲಿ : ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿಪಕ್ಷದ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ಇದೀಗಾ ಮತ್ತೆ ರೋಸ್ ಅವೆನ್ಯೂ ನ್ಯಾಯಾಲಯವು ಸಿಸೋಡಿಯಾಗೆ ಜೂನ್ 2 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ವಿಶೇಷ ಸಿಬಿಐ ನ್ಯಾಯಾಧೀಶ ಎಂ.ಕೆ ನಾಗ್ಪಾಲ್ ಅವರು ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ :ದೆಹಲಿ ಮದ್ಯ ಹಗರಣ: ಸಿಸೋಡಿಯಾಗೆ ಮೇ 23ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್..
ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಕೊನೆಯಲ್ಲಿ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಕರೆತರಲಾಯಿತು. ಅದರೇ ನ್ಯಾಯಾಲಯದ ಮುಂದೆ ಬಾಕಿ ಇರುವ ಆರೋಪಗಳ ಪಟ್ಟಿಗಳನ್ನು ಪರಿಗಣಿಸಿ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ಈ ಮೊದಲು ಸಿಸೋಡಿಯಾ ಅವರಿಗೆ ಇದೆ ಮೇ ತಿಂಗಳ 23ವರೆಗೆ ನ್ಯಾಯಾಂಗ ಬಂಧನವನ್ನು ಈ ನ್ಯಾಯಾಲಯವು ವಿಸ್ತರಿ ಆದೇಶ ನೀಡಿತ್ತು.
ಇದನ್ನೂ ಓದಿ :5 ದಿನ ಸಿಬಿಐ ಕಸ್ಟಡಿಗೆ ದೆಹಲಿ ಸಚಿವ ಮನೀಶ್ ಸಿಸೋಡಿಯಾ; ಆಪ್ನಿಂದ ತೀವ್ರ ಪ್ರತಿಭಟನೆ