ದುಡಿಯಲು ಹೋಗುತ್ತಿದ್ದವರ ಕ್ರೂಸರ್ಗೆ ಲಾರಿ ಡಿಕ್ಕಿಯಾಗಿ 9 ಜನ ದುರ್ಮರಣ.. ಅಪಘಾತದ ಭೀಕರತೆ ಬಿಚ್ಚಿಟ್ಟ ಗಾಯಾಳು - ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್
ತುಮಕೂರು: ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ 4 ಗಂಟೆಯ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲಸಕ್ಕೆಂದು ಕ್ರೂಸರ್ನಲ್ಲಿ ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದ ಕೂಲಿ ಕಾರ್ಮಿಕರಿಗೆ ಯಮನಂತೆ ಬಂದು ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಕ್ರೂಸರ್ನಲ್ಲಿದ್ದ ಶಿವರಾಜ್ ಎಂಬುವರು ಅಪಘಾತದ ಬಗ್ಗೆ ಈಟಿವಿ ಭಾರತಕ್ಕೆ ವಿವರಿಸಿದ್ದಾರೆ.
Last Updated : Feb 3, 2023, 8:27 PM IST