ಮಕ್ಕಳಿಗೆ ಸಿಹಿ ನೀಡಿ ಶಾಲೆಗೆ ಸ್ವಾಗತಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ- ವಿಡಿಯೋ - ಈಟಿವಿ ಭಾರತ ಕನ್ನಡ
ದೇವನಹಳ್ಳಿ (ಬೆಂಗಳೂರು ಗ್ರಾ.): ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿ, ಬಸವನಪುರ ಮತ್ತು ಜಾಲಿಗೆ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದರು. ಶಾಲಾ ಮಕ್ಕಳಿಗೆ ಸಮವಸ್ತ್ರ, ಪುಸ್ತಕದೊಂದಿಗೆ ಹೂ ಕೊಟ್ಟು ಸಿಹಿ ವಿತರಣೆ ಮಾಡಿ ಮಕ್ಕಳಿಗೆ ಸ್ವಾಗತ ಕೋರಿದರು. ಶಾಲೆಯ ಅಭಿವೃದ್ಧಿ ಸಮಿತಿ, ಪಾಲಕರು ಹಾಗೂ ಶಿಕ್ಷಕರೊಂದಿಗೆ ಸಮಾಲೋಚನೆ ಸಹ ನಡೆಸಿದರು. ಮೊದಲ ಬಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ಕೊಟ್ಟ ಸಚಿವರನ್ನು ಜಿಲ್ಲಾಡಳಿತ ಹಾಗೂ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.
ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಹುಬ್ಬಳ್ಳಿಯ ಬಸವ ಕೇಂದ್ರ ಶಾಲೆಯಲ್ಲಿ ಮೊದಲ ದಿನ ಶಾಲೆಗೆ ಬಂದ ಮಕ್ಕಳನ್ನು ವಿನೂತನ ರೀತಿಯಲ್ಲಿ ಬರಮಾಡಿಕೊಳ್ಳಲಾಯಿತು. ಮನೆಗೆ ಬರುವ ಅತಿಥಿಗಳಿಗೆ ಶುಭ ಕೋರಿ ಸ್ವಾಗತಿಸುವ ರೀತಿಯಲ್ಲಿ ಶಾಲೆ ಸಿಬ್ಬಂದಿ ಮಕ್ಕಳಿಗೆ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಮೂಲಕ ಶೈಕ್ಷಣಿಕ ವರ್ಷಕ್ಕೆ ಬರಮಾಡಿಕೊಂಡರು.
ಇದನ್ನೂ ಓದಿ:ಇಂದಿನಿಂದ ಸರ್ಕಾರಿ ಶಾಲೆ ಆರಂಭ: ಪಠ್ಯ ಪುಸ್ತಕ ವಿತರಣೆ ವಿಳಂಬ ಸಾಧ್ಯತೆ