ಶಿವಮೊಗ್ಗ: ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಗಂಡು ಚಿರತೆ ಸಾವು - ಈಟಿವಿ ಭಾರತ ಕನ್ನಡ
ಶಿವಮೊಗ್ಗ:ಕಾಡು ಪ್ರಾಣಿಗಳ ಬೇಟೆಗೆಂದು ಹಾಕಿದ್ದ ಉರುಳಿಗೆ ಸಿಲುಕಿ 4 ರಿಂದ 5 ವರ್ಷ ಪ್ರಾಯದ ಗಂಡು ಚಿರತೆಯೊಂದು ಸಾವನ್ನಪ್ಪಿದ್ದೆ. ಜಿಲ್ಲೆಯ ಹೊಸನಗರ ತಾಲೂಕಿನ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ ಈ ಘಟನೆ ನಡೆದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅರಣ್ಯ ಇಲಾಖೆಯ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಸೂಕ್ತ ವಿಧಿವಿಧಾನ ಕೈಗೊಳ್ಳಲಾಗಿದೆ ಎಂದು ನಗರ ವಲಯ ಆರ್.ಎಫ್.ಒ ಸಂಜಯ್ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲವರ ಮೇಲೆ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮಕ್ಕೆ ಇಲಾಖೆ ಮುಂದಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವನ್ಯ ಜೀವಿ ವೈದ್ಯರಾದ ಮುರುಳಿ ಮನೋಹರ್ ಮಾಹಿತಿ ನೀಡಿದ್ದಾರೆ.