ಕೆಪಿಸಿಸಿಯಿಂದ ಖರ್ಗೆ ಸ್ವಾಗತಕ್ಕೆ ಸಜ್ಜು: ಕಲಬುರಗಿಯಿಂದ ಬೆಂಗಳೂರಿನತ್ತ ಅಭಿಮಾನಿಗಳ ದಂಡು - ಬೆಂಗಳೂರಿನ ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ
ಕಲಬುರಗಿ: ಎಐಸಿಸಿ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಇಂದು ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಕೆಪಿಸಿಸಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೆದಾರ, ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ್ ನೇತೃತ್ವದಲ್ಲಿ ಕಲಬುರಗಿ ಜಿಲ್ಲೆಯಿಂದ ಅಪಾರ ಸಂಖ್ಯೆಯಲ್ಲಿ ಖರ್ಗೆ ಅಭಿಮಾನಿಗಳು ಸರ್ವೋದಯ ಸಮಾವೇಶಕ್ಕೆ ತೆರಳಿದ್ದಾರೆ. ಅಫಜಲಪುರ ತಾಲೂಕಿನಿಂದ ಜೆ.ಎಂ ಕೊರಬು ನೇತೃತ್ವದಲ್ಲಿಯೂ ಒಂದು ಸಾವಿರ ಜನ ಸಮಾವೇಶದಲ್ಲಿ ಭಾಗಿಯಾಗಲು ತೆರಳಿದ್ದಾರೆ. ಸಮಾವೇಶದಲ್ಲಿ ಪಾಲ್ಗೊಂಡು ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
Last Updated : Feb 3, 2023, 8:31 PM IST