ಎದೆ ಮೇಲೆ 'ಸಿದ್ದರಾಮಯ್ಯ ಸಿಎಂ' ಎಂದು ಟ್ಯಾಟೂ ಹಾಕಿಸಿಕೊಂಡ ವ್ಯಕ್ತಿ: ವಿಡಿಯೋ - ಕರ್ನಾಟಕ ಚುನಾವಣೆ
ಮೈಸೂರು: ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತಿದ್ದಂತೆ ಮೈಸೂರಿನಲ್ಲಿ ವ್ಯಕ್ತಿಯೊಬ್ಬರು ತಮ್ಮ ಎದೆಯ ಮೇಲೆ 'ಸಿದ್ದರಾಮಯ್ಯ ಸಿಎಂ' ಹಚ್ಚೆ ಹಾಕಿಸಿಕೊಂಡಿದ್ದಾರೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಊಹಾಪೋಹಗಳು ಹೆಚ್ಚಾಗಿರುವ ನಡುವೆ ವ್ಯಕ್ತಿಯೊಬ್ಬ ತನ್ನ ಟ್ಯಾಟೂ ತೋರಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.
ಕಾಂಗ್ರೆಸ್ ಪಕ್ಷ ಇನ್ನೂ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಲ್ಲ. ಆದರೆ, ಕರ್ನಾಟಕದ ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹೆಸರು ಭಾರಿ ಚರ್ಚೆಯಾಗುತ್ತಿವೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ರಾಜ್ಯದ ಹಿತದೃಷ್ಟಿಯಿಂದ ತಮ್ಮ ತಂದೆ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ತಮ್ಮ ಮನೆ ಮುಂದೆ ಜಮಾಯಿಸಿದ್ದ ಕಾರ್ಯಕರ್ತರಿಗೆ ಡಿ.ಕೆ.ಶಿವಕುಮಾರ ನಮಸ್ಕರಿಸಿ, ಧನ್ಯವಾದ ತಿಳಿಸಿದರು. ಕರ್ನಾಟಕ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಪಕ್ಷ 113 ಸ್ಥಾನಗಳನ್ನು ಗೆಲ್ಲಬೇಕು. ಕಾಂಗ್ರೆಸ್ ಈಗಾಗಲೇ 133 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 66 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ಬಾವ ನಿಧನ: ಗೆಲುವಿನ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ