ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ : 25 ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ - ಈಟಿವಿ ಭಾರತ ಕನ್ನಡ
ನವದೆಹಲಿ:ಪಶ್ಚಿಮ ದೆಹಲಿಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಗೋಡಾನ್ನಲ್ಲಿದ್ದ ಅಪಾರ ಪ್ರಮಾಣದ ವಸ್ತಗಳು ಸುಟ್ಟುಕರಕಲಾಗಿವೆ. ಇನ್ನು ಸುಮಾರು 25 ಅಗ್ನಿಶಾಮಕದ ದಳ ವಾಹನಗಳು ಸ್ಥಳಕ್ಕ ಧಾವಿಸಿ ಬೆಂಕಿ ನಂದಿಸಿವೆ. ದೆಹಲಿಯ ಟಿಕ್ರಿ ಕಲಾನ್ ಪಿವಿಸಿ ಮಾರುಕಟ್ಟೆಯಲ್ಲಿನ ಪ್ಲಾಸ್ಟಿಕ್ ಗೋದಾಮು ಇದಾಗಿದ್ದು, ಇಂದು ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೌದೆ ಗೋದಾಮಿನಲ್ಲಿ ಬೆಂಕಿ ಅವಘಡ:ಶುಕ್ರವಾರದಂದುದೆಹಲಿಯ ಸಮಲ್ಖಾ ಕಪಶೇರಾ ಪ್ರದೇಶದಲ್ಲಿನ ಸೌದೆ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಸುಮಾರು 16ಕ್ಕೂ ಹೆಚ್ಚು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದವು. ಇನ್ನು ಗೋದಾಮಿನಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದವು. ಘಟನೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ಇನ್ನು ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಇಲಾಖೆಯ ವಿಭಾಗೀಯ ಅಧಿಕಾರಿ ತಿಳಿಸಿದ್ದರು.
ಇದನ್ನೂ ಓದಿ:ಸಿಲಿಂಡರ್ ಸ್ಪೋಟಗೊಂಡು ಮನೆಗೆ ಬೆಂಕಿ : ನಾಲ್ಕು ಮಕ್ಕಳ ಸಾವು, ನಾಲ್ವರಿಗೆ ಗಂಭೀರ ಗಾಯ