ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: 60ಕ್ಕೂ ಹೆಚ್ಚು ಟ್ಯಾಂಕರ್ಗಳು ಬೆಂಕಿಗಾಹುತಿ - ಗುಜರಾತ್ನಲ್ಲಿ ಬೆಂಕಿ ಅವಘಡ
Published : Oct 25, 2023, 2:21 PM IST
ಅರಾವಳಿ (ಗುಜರಾತ್):ಗುಜರಾತ್ನಅರಾವಳಿ ಜಿಲ್ಲೆಯಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಇಂದು ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ರಾಸಾಯನಿಕ ತುಂಬಿದ 60ಕ್ಕೂ ಹೆಚ್ಚು ಟ್ಯಾಂಕರ್ಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ. 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ.
ಮಹಾರಾಷ್ಟ್ರದಲ್ಲೂ ಬೆಂಕಿ ಅವಘಡ:ಮಹಾರಾಷ್ಟ್ರದಭಿವಂಡಿಯಲ್ಲಿ ಬುಧವಾರ ಬೆಳಗ್ಗೆ ಬಾಯ್ಲರ್ ಸ್ಫೋಟಗೊಂಡು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳ ಮತ್ತು ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಜನರೇಟರ್ ಸ್ಫೋಟ:ಮಹಾರಾಷ್ಟ್ರದಮಹಾಬಲೇಶ್ವರದಲ್ಲಿ ನಿನ್ನೆ ರಾತ್ರಿ ದುರ್ಗಾ ಮಾತೆಯ ಮೆರವಣಿಗೆ ವೇಳೆ ಟ್ರಾಲಿಯಲ್ಲಿದ್ದ ಜನರೇಟರ್ ಸ್ಫೋಟಗೊಂಡು ಎಂಟು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮುಖ ಮತ್ತು ಬೆನ್ನಿನ ಭಾಗದಲ್ಲಿ ಸುಟ್ಟ ಗಾಯಗಳಾಗಿದ್ದು ಅವರನ್ನು ಕೂಡಲೇ ಸತಾರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜನರೇಟರ್ ಪೈಪ್ ನಿಂದ ಪೆಟ್ರೋಲ್ ಸೋರಿಕೆಯಾಗಿ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಅಹಮದಾಬಾದ್ನಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಬಸ್‌ಗೆ ಬೆಂಕಿ - 16 ಪ್ರಯಾಣಿಕರು ಸುರಕ್ಷಿತ!