ಕರ್ನಾಟಕ

karnataka

ಕಾರ್ಮಿಕ ಸಚಿವ ಸಂತೋಷ್ ಲಾಡ್

ETV Bharat / videos

ಧಾರವಾಡದಲ್ಲಿ 'ಶಕ್ತಿ ಯೋಜನೆ'ಗೆ ಚಾಲನೆ ನೀಡಲಿದ್ದಾರೆ ಸಚಿವ ಸಂತೋಷ‌ ಲಾಡ್ - ಕಾಂಗ್ರೆಸ್ ಗ್ಯಾರಂಟಿ ಯೋಜನೆ

By

Published : Jun 11, 2023, 10:08 AM IST

ಹುಬ್ಬಳ್ಳಿ/ ಧಾರವಾಡ: ಕರ್ನಾಟಕದಲ್ಲಿ ಉಚಿತ ಬಸ್ ಪ್ರಯಾಣ ಮಾಡಲು ಸರ್ಕಾರ ಮಹಿಳೆಯರಿಗೆ 'ಶಕ್ತಿ ಸ್ಮಾರ್ಟ್​ ಕಾರ್ಡ್' ನೀಡಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಐದು ಗ್ಯಾರಂಟಿ ಯೋಜನೆಯಲ್ಲಿ ಮೊದಲ ಗ್ಯಾರಂಟಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಲು ನನ್ನನ್ನು ಕಳಿಸಿದ್ದು ಅತ್ಯಂತ ಖುಷಿ ಸಂಗತಿ" ಎಂದರು. ಕಾರ್ಮಿಕ ಇಲಾಖೆಯ ಹಣವನ್ನು ಸಮರ್ಪಕವಾಗಿ ಬಳಕೆ ಮಾಡುವುದಾಗಿ ಇದೇ ವೇಳೆ ಭರವಸೆ ನೀಡಿದರು.

ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ 5 ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ 'ಶಕ್ತಿ ಯೋಜನೆ'ಗೆ ಇಂದು ಚಾಲನೆ ಸಿಗಲಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಈ ಯೋಜನೆಗೆ ವಿಧಾನಸೌಧ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು. ಮಧ್ಯಾಹ್ನದಿಂದ ರಾಜ್ಯದ ಮಹಿಳೆಯರು ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಹಾಗು ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಲೈಂಗಿಕ ಅಲ್ಪಸಂಖ್ಯಾತರಿಗೂ ಯೋಜನೆಯಡಿ ಉಚಿತ ಬಸ್ ಪ್ರಯಾಣ ದೊರೆಯಲಿದೆ.

ಇದನ್ನೂ ಓದಿ:Congress Guarantee Scheme: ಇಂದು ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ... ಶಕ್ತಿ ಯೋಜನೆ ಅದ್ಧೂರಿ ಚಾಲನೆಗೆ ಸಿದ್ಧತೆ

ABOUT THE AUTHOR

...view details