ಪೊಲೀಸ್ ಸಿಬ್ಬಂದಿಯ ರೈಫಲ್ ಕಸಿದು ಗುಂಡು ಹಾರಿಸಿದ ದುಷ್ಕರ್ಮಿಗಳು! - ಮೂವರು ಪೊಲೀಸರಿಗೆ ಗಾಯ
Published : Nov 1, 2023, 12:18 PM IST
ಮಹೋಬಾ (ಉತ್ತರ ಪ್ರದೇಶ) : ಪೊಲೀಸ್ ಸಿಬ್ಬಂದಿಯಿಂದ ರೈಫಲ್ ಕಸಿದುಕೊಂಡ ದುಷ್ಕರ್ಮಿಗಳು ಬಳಿಕ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಸೇರಿದಂತೆ ಇಬ್ಬರು ಆರೋಪಿಗಳು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ಮಂಗಳವಾರ ನಡೆದಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಎಸ್ಪಿ ಅಪರ್ಣಾ ಗುಪ್ತಾ, "ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. ಟ್ರಾಫಿಕ್ ಜಾಮ್ ಸಮಸ್ಯೆ ತೆರವುಗೊಳಿಸುವಾಗ ಪೊಲೀಸ್ ಸಿಬ್ಬಂದಿಯನ್ನು ಕೆಲವು ಕಿಡಿಗೇಡಿಗಳು ಥಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ, ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯಲಾಗುತ್ತಿತ್ತು. ದಾರಿಮಧ್ಯೆ ವಾಹನದಿಂದ ಇಳಿದ ಇಬ್ಬರು ಆರೋಪಿಗಳು ಪೊಲೀಸ್ ಸಿಬ್ಬಂದಿ ಬಳಿ ಇದ್ದ ರೈಫಲ್ ಕಸಿದು ಗುಂಡು ಹಾರಿಸಿದ್ದಾರೆ. ಘಟನೆಯಿಂದ ಓರ್ವ ಸಬ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ ಪೊಲೀಸರು ಆರೋಪಿಗಳಿಬ್ಬರ ಕಾಲಿಗೆ ಗುಂಡೇಟು ನೀಡಿದ್ದಾರೆ. ಗಾಯಾಳುಗಳನ್ನು ಸಿಹೆಚ್ಸಿ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ" ಎಂದರು.
ಇದನ್ನೂ ಓದಿ :ಬೆಂಗಳೂರಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ಮಾಲೀಕನ ಮೇಲೆ ಗುಂಡಿನ ದಾಳಿ: ಒಂದು ಕೆಜಿ ಚಿನ್ನದೊಂದಿಗೆ ದರೋಡೆಕೋರರು ಪರಾರಿ!