ಗೆದ್ದರೂ ಬಿಕ್ಕಿ ಬಿಕ್ಕಿ ಅತ್ತ ಬಿಜೆಪಿ ಅಭ್ಯರ್ಥಿ ಪ್ರಭು ಚೌಹಾಣ್.. - ಈಟಿವಿ ಭಾರತ್ ಕನ್ನಡ ಸುದ್ದಿ
ಬೀದರ್ : ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಕಣ್ಣೀರು ಹಾಕುವ ಮೂಲಕ ಶಾಸಕ ಪ್ರಭು ಚೌಹಾಣ್ ಅವರು ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸೋಲಿಸಲು ನಮ್ಮ ಪಕ್ಷದ ಕೇಂದ್ರ ಸಚಿವರು ಬಿ ಟೀಂ ರಚಿಸಿಕೊಂಡು ನಾನಾ ಕುತಂತ್ರ ಮಾಡಿದರು. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ 500 ಮುಖಂಡರು ಪಕ್ಷ ತೊರೆದು ನನ್ನನ್ನು ಸೋಲಿಸಲು ಸಾಕಷ್ಟು ತಂತ್ರ ಮಾಡಿದರು. ಕೊನೆಗೂ ಕ್ಷೇತ್ರದ ಮತದಾರರು ನನ್ನ ಕೈ ಹಿಡಿದಿದ್ದಾರೆ ಎಂದರು.
ಪಕ್ಷದ ಹೈಕಮಾಂಡ್ಗೆ, ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಜ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ದೂರು ಕೊಡುತ್ತೇನೆ. ಮುಂದೆ ಲೋಕಸಭೆ ಚುನಾವಣೆಯಲ್ಲಿ ಹೇಗೆ ಗೆಲ್ಲುತ್ತಾರೆ ಎಂಬುದನ್ನು ನೋಡುತ್ತೇನೆ ಎಂದು ಕಣ್ಣೀರು ಹಾಕುವ ಮೂಲಕ ತಮ್ಮ ನೋವು ತೋಡಿಕೊಂಡರು.
ಇದನ್ನೂ ಓದಿ:ಲೋಕಸಭೆ ಚುನಾವಣೆಗೆ ಇದು ಮೆಟ್ಟಿಲು, ರಾಹುಲ್ ಗಾಂಧಿ ಪ್ರಧಾನಿ ಆಗಲಿ: ಸಿದ್ದರಾಮಯ್ಯ