ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ವಿಶೇಷ ಪೂಜೆ ನೆರವೇರಿಸಿದ ಶಾಸಕ ಡಾ.ಶಿವರಾಜ್ ಪಾಟೀಲ್ - ಶಾಸಕ ಡಾ ಶಿವರಾಜ್ ಪಾಟೀಲ್
Published : Nov 11, 2023, 2:34 PM IST
ರಾಯಚೂರು : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕ ಬಿ.ವೈ. ವಿಜಯೇಂದ್ರ ಆಯ್ಕೆಯಾದ ಹಿನ್ನೆಲೆಯಲ್ಲಿ ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ನಗರದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಇಂದು ವಿಶೇಷ ಪೂಜೆ ನೆರವೇರಿಸಿ, ಬಳಿಕ ವೃತ್ತದಲ್ಲಿ ಪಟಾಕಿ ಹರಿಸಿ, ಸಿಹಿ ಹಂಚುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ನೇಮಕವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ವಿಜಯೇಂದ್ರ ಆಯ್ಕೆ ಟೀಕಿಸುತ್ತಿರುವ ಕಾಂಗ್ರೆಸ್ಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಶಿವರಾಜ್ ಪಾಟೀಲ್, ಬಿಜೆಪಿ ಕೇಂದ್ರ ನಾಯಕರು ರಾಜ್ಯಾಧ್ಯಕ್ಷರನ್ನಾಗಿ ಬಿ. ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ. ಕೇಂದ್ರ ನಾಯಕರು ನಮ್ಮ ರಾಜ್ಯಕ್ಕೆ ದೀಪಾವಳಿ ಉಡುಗೊರೆ ನೀಡಿದ್ದಾರೆ. ಅವರ ಆಯ್ಕೆ ಹಿನ್ನೆಲೆಯಲ್ಲಿ ದೇವರಿಗೆ ವಿಶೇಷ ಪೂಜೆ ನೇರವೇರಿಸಲಾಗಿದ್ದು, ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ಈ ವೇಳೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ :ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷಿಸಿರಲಿಲ್ಲ, ಅವಕಾಶ ಕೇಳಿಯೂ ಇರಲಿಲ್ಲ : ಯಡಿಯೂರಪ್ಪ