ಬೈಕ್ ಡಿಕ್ಕಿಯಲ್ಲಿಟ್ಟಿದ್ದ ಹಣ ದೋಚಿದ ಖದೀಮರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣ
ಆನೇಕಲ್: ಬೈಕ್ ಡಿಕ್ಕಿಯಲ್ಲಿಟ್ಟಿದ್ದ ಹಣವನ್ನು ಖದೀಮರು ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ 1.30 ರ ಸುಮಾರಿಗೆ ಪಟ್ಟಣದ ಬ್ಯಾಂಕ್ ಆಫ್ ಬರೋಡಾದಿಂದ ಒಂದೂವರೆ ಲಕ್ಷ ರೂ ಡ್ರಾ ಮಾಡಿಕೊಂಡು ಬಂದಿದ್ದ ಸಂಜು ಕುಮಾರ್ ಎಂಬುವವರು ತಮ್ಮ ಆ್ಯಕ್ಟಿವ್ ಹೋಂಡಾ ವಾಹನದ ಡಿಕ್ಕಿಯಲ್ಲಿ ಇಟ್ಟಿದ್ದರು. ಓಮಿನಿ ಕಾರಿನಲ್ಲಿ ಬಂದಿದ್ದ ನಾಲ್ವರು ಖದೀಮರ ತಂಡ ಜನರು ಓಡಾಟ ಇರುವಾಗಲೇ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ದೋಚಿದ್ದಾರೆ. ಬೈಕ್ನಲ್ಲಿ ಹಣ ಇಟ್ಟಿದ್ದ ಸಂಜು ಕುಮಾರ್ ದ್ವಿಚಕ್ರ ವಾಹನದ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸಂಜು ಕುಮಾರ್ ಆನೇಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Last Updated : Feb 3, 2023, 8:34 PM IST