ಕರ್ನಾಟಕ

karnataka

ETV Bharat / videos

ನದಿಗೆ ಲಕ್ಷ ಕ್ಯೂಸೆಕ್ ನೀರು: ಶ್ರೀಕೃಷ್ಣದೇವರಾಯ ಸಮಾಧಿ ಸ್ಮಾರಕ ಜಲಾವೃತ, ಸೇತುವೆ ಸಂಚಾರ ಸ್ಥಗಿತ - ಸೇತುವೆ ಮೇಲಿನ ಸಂಚಾರ ಸ್ಥಗಿತ

By

Published : Sep 8, 2022, 1:38 PM IST

Updated : Feb 3, 2023, 8:27 PM IST

ಗಂಗಾವತಿ: ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯೂಸೆಕ್​ಗೂ ಅಧಿಕ ಪ್ರಮಾಣ ನೀರು ಬಿಟ್ಟಿರುವ ಪರಿಣಾಮ ಆನೆಗೊಂದಿ ಭಾಗದಲ್ಲಿನ ಐತಿಹಾಸಿಕ ಸ್ಮಾರಕಗಳು ಜಲಾವೃತವಾಗಿವೆ. ಅಲ್ಲದೆ ಗಂಗಾವತಿ-ಕಂಪ್ಲಿ ಸೇತುವೆ ಮೇಲಿನ ಸಂಚಾರ ಸ್ಥಗಿತವಾಗಿದೆ. ನದಿ ತುಂಬಿ ಹರಿಯುತ್ತಿರುವುದರಿಂದ ಪ್ರವಾಹದ ಸ್ಥಿತಿ ನಿರ್ಮಾಣವಾಗಿದ್ದು, ಗಂಗಾವತಿ-ಕಂಪ್ಲಿ ಸೇತುವೆ ಮುಳುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಪರಿಣಾಮ ಸೇತುವೆ ಮೇಲಿನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಗಂಗಾವತಿ ಗ್ರಾಮೀಣ ಪೊಲೀಸರು ಬ್ಯಾರಿಕೇಡ್ ಹಾಕಿ ಜನ ಸಂಚಾರ ನಿರ್ಬಂಧಿಸಿದ್ದಾರೆ. ಆನೆಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯನ ಸಮಾಧಿ ಸ್ಥಳ ಎಂದು ಜನ ಗುರುತಿಸುವ 64 ಕಾಲಿನ ಮಂಟಪ ಸಂಪೂರ್ಣ ಮುಳುಗಿದೆ. ಅಲ್ಲದೇ ನವವೃಂದಾವನ ಗಡ್ಡೆಗೆ ತೆರಳುವ ಮಾರ್ಗ ಸ್ಥಗಿತವಾಗಿದ್ದು, ಧಾರ್ಮಿಕ ಕಾರ್ಯಕ್ಕೆ ಅಡಚಣೆಯಾಗಿದೆ.
Last Updated : Feb 3, 2023, 8:27 PM IST

ABOUT THE AUTHOR

...view details