ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ.. ನಡು ರಸ್ತೆಯಲ್ಲಿ ಹೊತ್ತಿ ಉರಿದ ವಾಹನ - ಹಾಸನ
ಹಾಸನ: ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಗರದ ಹೃದಯ ಭಾಗದಲ್ಲಿರುವ ಡಿಸಿ ಕಚೇರಿ ಎದುರಿನ ಬಿ.ಎಂ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆ ಮಧ್ಯೆ ಕಾರು ನಿಲ್ಲಿಸಿ ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನೋಡ ನೋಡುತ್ತಲೇ ಕಾರು ಹೊತ್ತಿ ಉರಿದಿದೆ. ಸ್ಥಳಕ್ಕಾಗಮಿಸಿದ ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಕಾರು ಬೆಂಕಿಗಾಹುತಿಯಾಗಿದೆ. ಹಾಸನದ ಉದಯಗಿರಿ ಬಡಾವಣೆಯ ಕಂದಾಯ ಇಲಾಖೆಯ ನೌಕರ ರಾಜೀವ್ ಎಂಬುವರಿಗೆ ಸೇರಿದ ಕಾರು ಇದಾಗಿದೆ. ಅವರು ಪತ್ನಿ ಹಾಗೂ ಪುತ್ರನೊಂದಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಳಿಕ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗರ್ಭಿಣಿ ಸೇರಿ ಇಬ್ಬರು ಸಾವು:ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಗರ್ಭಿಣಿ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿತ್ತು.
ಇದನ್ನೂ ಓದಿ:ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಗರ್ಭಿಣಿ ಸೇರಿ ಇಬ್ಬರು ಸಾವು