ಸಿದ್ದರಾಮಯ್ಯನವರಿಗೆ ಸಂಸ್ಕೃತಿ ಪದದ ನೆನಪಾದರೂ ಆಯಿತಲ್ಲ, ಧನ್ಯವಾದಗಳು: ಸಂಸದ ಹೆಗಡೆ - ಸಿಎಂ ಸಿದ್ದರಾಮಯ್ಯ
Published : Jan 14, 2024, 6:48 PM IST
ಶಿರಸಿ(ಉತ್ತರ ಕನ್ನಡ): "ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸ್ಕೃತಿ ಎಂಬ ಪದದ ನೆನಪಾದರೂ ಆಯಿತಲ್ಲ ಅದಕ್ಕಾಗಿ ಅವರಿಗೆ ಧನ್ಯವಾದಗಳು" ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದರು. ಶಿರಸಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ತಮ್ಮ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿ, "ಅದು ನನ್ನ ಗಮನಕ್ಕೆ ಬಂದಿಲ್ಲ, ನೋಡುತ್ತೇನೆ" ಎಂದು ಹೇಳಿದರು.
ಅನಂತ ಕುಮಾರ್ ಹೆಗಡೆಯವರ ಹೇಳಿಕೆ ಸುಸಂಸ್ಕೃತವಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, "ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸ್ಕೃತಿ ಎಂಬ ಪದದ ನೆನಪಾದರೂ ಆಯಿತಲ್ಲ, ಅದಕ್ಕಾಗಿ ಅವರಿಗೆ ಧನ್ಯವಾದಗಳು" ಎಂದು ತಿರುಗೇಟು ನೀಡಿದರು. ತಮ್ಮ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರಿಂದ ಟೀಕೆ ವ್ಯಕ್ತವಾಗುತ್ತಿರುದಕ್ಕೆ ಸ್ವಾಗತ ಎಂದರು.
ಮತ್ತೊಂದೆಡೆ, ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಪೊಲೀಸರು ಐಪಿಸಿ ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಅನಂತ್ ಕುಮಾರ್ ಹೆಗಡೆಗೆ ಚುನಾಯಿತ ಪ್ರತಿನಿಧಿಯಾಗುವ ಯೋಗ್ಯತೆ ಇಲ್ಲ: ರಾಮಲಿಂಗಾರೆಡ್ಡಿ