ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದೆ ಸುಮಲತಾ - ಈಟಿವಿ ಭಾರತ ಕನ್ನಡ
ಮಂಡ್ಯ: ಕೃಷ್ಣರಾಜಸಾಗರ ಜಲಾಶಯಕ್ಕೆ ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸುಮಲತಾ, ನಾನು ಸಂಸದೆಯಾದ ಮೇಲೆ ಮೂರು ವರ್ಷಗಳಲ್ಲೂ ಸಹ ಕಾವೇರಿ ತುಂಬಿ ಹರಿಯುತ್ತಿದೆ. ಇದು ನಿಜಕ್ಕೂ ಸಂತೋಷದ ಸಂಗತಿ. ಪ್ರತಿವರ್ಷವೂ ಇದೇ ರೀತಿ ಕಾವೇರಿ ತುಂಬಿ ಹರಿದು ಜನರ ಕಷ್ಟಗಳನ್ನು ಕಳೆಯುವಂತಾಗಲಿ. ಸಿಎಂ ಬೊಮ್ಮಾಯಿ ಬಾಗಿನ ಅರ್ಪಿಸಿದ ವೇಳೆ ನಾನು ಭಾಗವಹಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಇಂದು ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು.
Last Updated : Feb 3, 2023, 8:26 PM IST