ಇಟಲಿ ಪ್ರಧಾನಿ ಮೆಲೋನಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಪಿಎಂ ಮೋದಿ - ಇಟಲಿ ಪ್ರಧಾನಿಯವರನ್ನ ಆತ್ಮೀಯವಾಗಿ ಬರಮಾಡಿಕೊಂಡ ಪಿಎಂ ಮೋದಿ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ಆತ್ಮೀಯವಾಗಿ ಬರಮಾಡಿಕೊಂಡರು. ಸಂಜೆ ಪ್ರಾರಂಭವಾಗಲಿರುವ 8ನೇ ರೈಸಿನಾ ಸಂವಾದದಲ್ಲಿ ಮೆಲೋನಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಮೆಲೋನಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮಧ್ಯಾಹ್ನ ಭೇಟಿಯಾಗಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಸಹ ಇಟಲಿ ಪ್ರಧಾನಿಯವರನ್ನೂ ಭೇಟಿ ಮಾಡಲಿದ್ದಾರೆ.
ಇದನ್ನೂ ಓದಿ:ದೆಹಲಿಯಲ್ಲಿಂದು ಜಿ20 ವಿದೇಶಾಂಗ ಸಚಿವರ ಸಭೆ: ರಷ್ಯಾ-ಉಕ್ರೇನ್ ಬಿಕ್ಕಟ್ಟು ಶಮನಕ್ಕೆ ಸಿಗುತ್ತಾ ಪರಿಹಾರ?