ರಾಷ್ಟ್ರೀಯ ಯುವಜನೋತ್ಸವ ಸಂಪನ್ನ: ಅಧಿಕಾರಿಗಳ ಭರ್ಜರಿ ಡ್ಯಾನ್ಸ್ - ಅಧಿಕಾರಿಗಳ ಡ್ಯಾನ್ಸ್
ಧಾರವಾಡ: ಅವಳಿ ನಗರದಲ್ಲಿ 5 ದಿನಗಳ ಕಾಲ ನಡೆದ ರಾಷ್ಟ್ರೀಯ ಯುವಜನೋತ್ಸವ ಸೋಮವಾರ ಸಂಪನ್ನಗೊಂಡಿದೆ. ಯುವಜನೋತ್ಸವ ಯಶಸ್ವಿಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೇತೃತ್ವದಲ್ಲಿ ಅಧಿಕಾರಿಗಳು ಕುಣಿದು ಕುಪ್ಪಳಿಸಿದರು. ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಮಿತ್ ತ್ರಿವೇದಿ ಅವರ ಹಾಡಿಗೆ ಅಧಿಕಾರಿಗಳು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಹುಡಾ ಆಯುಕ್ತ ಸಂತೋಷ ಬಿರಾದಾರ ಸೇರಿದಂತೆ ಅನೇಕರಿದ್ದರು.