Opposition parties meeting: ಬೆಂಗಳೂರಿಗೆ ಆಗಮಿಸಿದ ಎನ್‌ಸಿಪಿ ವರಿಷ್ಠ ಶರದ್ ಪವಾರ್ - ವಿರೋಧ ಪಕ್ಷಗಳ ಸಭೆ
ಬೆಂಗಳೂರು:ನಗರಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಮತ್ತು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ನಗರಕ್ಕೆ ಆಗಮಿಸಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್, ರಾಜ್ಯ ಸಚಿವರಾದ ಎಂ ಬಿ ಪಾಟೀಲ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಮಾನ ನಿಲ್ದಾಣದಲ್ಲಿ ಎನ್‌ಸಿಪಿ ವರಿಷ್ಠರನ್ನು ಬರಮಾಡಿಕೊಂಡರು.
ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಒಗ್ಗಟ್ಟಿನ ಮೈತ್ರಿ ಮಾಡಿಕೊಳ್ಳಲು ಇಂದು ನಗರದಲ್ಲಿ ನಡೆಯಲಿರುವ 2ನೇ ಸಭೆಯಲ್ಲಿ 26 ಪಕ್ಷಗಳ ಬಿಜೆಪಿಯೇತರ ನಾಯಕರು ಮಾತುಕತೆ ನಡೆಸಲಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಾಜಿ ಸಂಸದ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಅಖಿಲೇಶ್ ಯಾದವ್, ಸಿಪಿಐ-ಎಂ ನಾಯಕ ಸೀತಾರಾಮ್ ಯೆಚೂರಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ:ವಿಪಕ್ಷಗಳ ಸಭೆ: ಬೆಂಗಳೂರಿಗೆ ಬಂದಿಳಿದ ಸೋನಿಯಾ, ರಾಹುಲ್, ಅಖಿಲೇಶ್, ಮಮತಾ ಸೇರಿ ಇನ್ನೂ ಹಲವು ಗಣ್ಯರು!