ದೆಹಲಿಯತ್ತ ಹೊರಟ ನೂತನ ಸಿಬಿಐ ಡೈರೆಕ್ಟರ್ ಪ್ರವೀಣ್ ಸೂದ್ - New CBI Director Praveen Sood
ದೇವನಹಳ್ಳಿ: ನೂತನ ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರು ದೆಹಲಿಯತ್ತ ಹೊರಟಿದ್ದಾರೆ. ಸಿಬಿಐ ಡೈರೆಕ್ಟರ್ ಆಗಿ ಅಧಿಕಾರ ಸ್ವೀಕರಿಸಲು ಪ್ರವೀಣ್ ಸೂದ್ ಇಂದು ದೆಹಲಿಗೆ ಪ್ರಯಾಣ ಬೆಳೆಸಿದರು. ರಾಜ್ಯದ ಡಿಜಿಯಿಂದ ಸಿಬಿಐಗೆ ವರ್ಗಾವಣೆಯಾಗಿರುವ ಹಿನ್ನೆಲೆ ನಿನ್ನೆಯಷ್ಟೇ ಡಿಐಜಿ ಹುದ್ದೆಯಿಂದ ನಿರ್ಗಮಿಸಿದ್ದರು. ಇದೀಗ ದೆಹಲಿಯಲ್ಲಿ ಅಧಿಕಾರ ಸ್ವೀಕಾರ ಮಾಡಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಷ್ಟ್ರ ರಾಜಧಾನಿಗೆ ತೆರಳಿದರು. ಇದಕ್ಕೂ ಮುನ್ನ ಪ್ರವೀಣ್ ಸೂದ್ ಅವರಿಗೆ ಏರ್ಪೋರ್ಟ್ನಲ್ಲಿ ಸಿಐಎಸ್ಎಫ್ ಅಧಿಕಾರಿಗಳಿಂದ ಸ್ವಾಗತ ಕೋರಲಾಯಿತು.
ಹಾಲಿ ಸಿಬಿಐ ನಿರ್ದೇಶಕ ಸುಭೋದ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅಧಿಕಾರ ಅವಧಿ ಮೇ 25 ರಂದು ಕೊನೆಗೊಳ್ಳಲಿದೆ. ಹಾಗಾಗಿ ಕೆಲ ದಿನಗಳ ಹಿಂದೆಯಷ್ಟೆ ರಾಜ್ಯದ ಡಿಜಿಪಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಪ್ರವೀಣ್ ಸೂದ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗೆ ಎರಡು ವರ್ಷಗಳ ಅವಧಿಗೆ ನಿರ್ದೇಶಕರಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.
ಇದನ್ನೂ ಓದಿ:ಶೀಘ್ರದಲ್ಲೇ ಸಿಬಿಐ ನಿರ್ದೇಶಕನಾಗಿ ಅಧಿಕಾರ ವಹಿಸಿಕೊಳ್ಳುವೆ: ಪ್ರವೀಣ್ ಸೂದ್ ಟ್ವೀಟ್