ಕರ್ನಾಟಕ

karnataka

ನಾಮಪತ್ರ ಸಲ್ಲಿಕೆಗೂ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್​ ಕುಮಾರಸ್ವಾಮಿ

ETV Bharat / videos

ದೇವೇಗೌಡರ ಆಶೀರ್ವಾದ ಪಡೆದ ಬಳಿಕ ನಾಮಪತ್ರ ಸಲ್ಲಿಸಿದ ನಿಖಿಲ್​ ಕುಮಾರಸ್ವಾಮಿ - ಈಟಿವಿ ಭಾರತ ಕನ್ನಡ

By

Published : Apr 17, 2023, 1:26 PM IST

Updated : Apr 17, 2023, 3:03 PM IST

ರಾಮನಗರ: ಜೆಡಿಎಸ್​ ಭದ್ರಕೋಟೆ ಎಂದೇ ಕರೆಸಿಕೊಂಡಿರುವ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾಗಲು ಜೆಡಿಎಸ್​ ಪಕ್ಷದಿಂದ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಇವರ ತಾಯಿ ಅನಿತಾ ಕುಮಾರಸ್ವಾಮಿ ಅವರೇ ಕ್ಷೇತ್ರದ ಶಾಸಕರಾಗಿದ್ದು, ಮಗನ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ರಾಮನಗರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ.

ಈ ಹಿನ್ನೆಲೆ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಅಭ್ಯಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ನಿಖಿಲ್​ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್​ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್​ ಡಿ ದೇವೇಗೌಡರ ಆಶೀರ್ವಾದ ಪಡೆದರು. ನಾಮಪತ್ರ ಸಲ್ಲಿಕೆಗೂ ಮೊದಲು ಕುಟುಂಬ ಸಮೇತ ದೊಡ್ಡವರಿಂದ ಆಶೀರ್ವಾದ ಪಡೆದಿದ್ದು, ಅವರ ಪಾಲಿಗೆ ಅದು ಭಾವುಕ ಕ್ಷಣವಾಗಿತ್ತು.

ತಾತನ ಆಶೀರ್ವಾದ ಪಡೆದ ನಿಖಿಲ್​ ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟರು. ಈ ವೇಳೆ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವರ ಪತ್ನಿ ಮತ್ತು ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ನಿಖಿಲ್​ ಪತ್ನಿ ಉಪಸ್ಥಿತರಿದ್ದರು. ಬಳಿಕ ರಾಮನಗರ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. 

ಈ ವೇಳೆ, ಅವರಿಗೆ ತಾಯಿ ಅನಿತಾ ಕುಮಾರಸ್ವಾಮಿ ಸಾಥ್​ ನೀಡಿದರು. ನಗರದ ಜೂನಿಯರ್​ ಕಾಲೇಜು ಮೈದಾನದಿಂದ ಮೆರವಣಿಗೆ ಹೊರಟು ಉಮೇದುವಾರಿಕೆ ಸಲ್ಲಿಕೆ ಮಾಡಲಾಯಿತು. ಇದಕ್ಕೂ ಮೊದಲು ಅವರು ಚಾಮುಂಡೇಶ್ವರಿ ದೇವಾಲಯ, ಗಣೇಶ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಸಂತ ಲೂರ್ದು ಮಾತೆ ಚರ್ಚ್​ ಮತ್ತು ಫೀರನ್​ ಷಾ ವಾಲಿ ದರ್ಗಾದಲ್ಲಿ ನಿಖಿಲ್​ ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ಓದಿ:ರಂಗೇರಿದ ರಾಮನಗರ ಚುನಾವಣಾ ಅಖಾಡ: ಯಾರ್‍ಯಾರ ಮಧ್ಯೆ ನಡೆಯಲಿದೆ ಪೈಪೋಟಿ ಗೊತ್ತಾ?

Last Updated : Apr 17, 2023, 3:03 PM IST

ABOUT THE AUTHOR

...view details