ಕೊಯಮತ್ತೂರು ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆ ಯತ್ನ: ಕಾಲು ಕಳೆದುಕೊಂಡ 60ರ ವೃದ್ಧ
ಕೊಯಮತ್ತೂರು: ಸೆಂಟ್ರಲ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ 60 ವರ್ಷದ ವ್ಯಕ್ತಿಯೊಬ್ಬರು ಏಕಾಏಕಿ ಕೇರಳ ರೈಲಿನ ಇಂಜಿನ್ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ವೃದ್ಧನ ಕಾಲು ರೈಲಿನ ಚಕ್ರಕ್ಕೆ ಸಿಲುಕಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವೃದ್ಧನನ್ನು ಪ್ರಯಾಣಿಕರು ಹಾಗೂ ರೈಲ್ವೆ ಪೊಲೀಸರು ರಕ್ಷಿಸಿ ಆ್ಯಂಬುಲೆನ್ಸ್ ಮೂಲಕ ಕೊಯಮತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈತ ಕೊಯಮತ್ತೂರಿನ ವಡವಳ್ಳಿ ಮೂಲದ ಮಹೇಶ್ ಎಂದು ತಿಳಿದು ಬಂದಿದೆ. ಘಟನೆ ಕುರಿತು ರೈಲ್ವೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Last Updated : Feb 3, 2023, 8:25 PM IST