ಭದ್ರಾವತಿಯಲ್ಲಿ ಹೊತ್ತಿ ಉರಿದ ಕಾರು.. ಚಾಲಕ ಪಾರು - Omni car burned in shivamogga
ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಉರಿದು ಸುಟ್ಟು ಕರಕಲಾಗಿರುವ ಘಟನೆ ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಸಂಭವಿಸಿದೆ. ತರೀಕೆರೆ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಇಡೀ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದು, ಆದರೆ ಬೆಂಕಿ ವ್ಯಾಪಕವಾಗಿ ಹರಡಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Last Updated : Feb 3, 2023, 8:23 PM IST