ಕರ್ನಾಟಕ

karnataka

ಮೋದಿ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆ

ETV Bharat / videos

ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆ - VIDEO - ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ

By

Published : Jul 24, 2023, 12:46 PM IST

ನವದೆಹಲಿ : ಉಭಯ ಸದನಗಳಲ್ಲಿ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳು (I.N.D.I.A) (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ) ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದವು. "ಪ್ರಧಾನ ಮಂತ್ರಿ ಜವಾಬ್ ದೋ", "ಪ್ರಧಾನ ಮಂತ್ರಿ ಸದನಕ್ಕೆ ಬರಬೇಕು" ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.  

ಚರ್ಚೆಗೆ ಸರ್ಕಾರ ಸಿದ್ಧ :ಮಣಿಪುರ ವಿಚಾರವಾಗಿ ಸಂಸತ್ತಿನಲ್ಲಿ ಪ್ರತಿಪಕ್ಷಗಳ ಗದ್ದಲಕ್ಕೆ ಸಂಬಂಧಿಸಿದಂತೆ ಸ್ಪೀಕರ್ ನಿರ್ದೇಶನ ನೀಡಿದಾಗ ಚರ್ಚೆಗೆ ಸಿದ್ಧ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಾವು ಚರ್ಚೆಗೆ ಸಿದ್ಧ ಎಂದು ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಸ್ಪೀಕರ್ ಮತ್ತು ರಾಜ್ಯಸಭೆ ಚೇರ್ಮನ್​ಗೆ ತಿಳಿಸಿದ್ದಾರೆ. ಪ್ರತಿಪಕ್ಷಗಳು ಹೊಸ ಬೇಡಿಕೆಗಳನ್ನು ತಂದು ಚರ್ಚೆಗೆ ಅಡ್ಡಿಪಡಿಸುವುದು ತಪ್ಪು. ಅಧಿವೇಶನದಲ್ಲಿ ಪ್ರಮುಖ ಮಸೂದೆಗಳ ಮಂಡನೆ ಬಾಕಿ ಇದೆ, ಮೋದಿ ನೇತೃತ್ವದಲ್ಲಿ ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಲು ಬಿಜೆಪಿ ಬಯಸಿದೆ. ಆದರೆ, ಪ್ರತಿಪಕ್ಷಗಳು ಸುಳ್ಳು ಸುದ್ದಿ ಸೃಷ್ಟಿಸಿ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಇದನ್ನೂ ಓದಿ :Manipur Violence: ಮಣಿಪುರದಲ್ಲಿ 10 ಮನೆಗಳು, ಶಾಲೆಗೆ ಬೆಂಕಿ ಹಚ್ಚಿದ ಶಸ್ತ್ರಸಜ್ಜಿತ ಮಹಿಳಾ ಬಂಡುಕೋರರ ಗುಂಪು

ABOUT THE AUTHOR

...view details