ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಿಂದ ನಮ್ಮ ನಾಯಕರು ಒಂದೇ ಒಂದು ಪೈಸೆಯನ್ನೂ ಮುಟ್ಟಿಲ್ಲ: ವೀರಪ್ಪ ಮೊಯ್ಲಿ - ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ತುಮಕೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ನಿರ್ದೇಶಕರಾಗಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು, ಅದರಿಂದ ಒಂದು ಪೈಸೆಯನ್ನೂ ತೆಗೆದುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಸ್ವಾತಂತ್ರ್ಯ ಹೋರಾಟದ ಹೆಗ್ಗುರುತಾಗಿದೆ. 1937ರಲ್ಲಿ ಕಾಂಗ್ರೆಸ್ ಮುಖಂಡರಾದ ಜವಾಹರ್ಲಾಲ್ ನೆಹರು, ಸರ್ದಾರ್ ವಲ್ಲಭಾಯಿ ಪಟೇಲ್ ಸೇರಿದಂತೆ ಅನೇಕರು ಈ ಪತ್ರಿಕೆಯನ್ನು ಸ್ವಾತಂತ್ರ್ಯ ಹೋರಾಟಕ್ಕೆ ಬಳಸಿಕೊಂಡಿದ್ದರು ಎಂದರು. ಕಾಂಗ್ರೆಸ್ ನಾಯಕಿ ಸೋನಿಯ ಗಾಂಧಿ ಮೇಲೆ ಇ.ಡಿ ಹಾಗೂ ಐ.ಟಿ ದಾಳಿ ಖಂಡಿಸಿ,ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
Last Updated : Feb 3, 2023, 8:25 PM IST