ಕರ್ನಾಟಕ

karnataka

ETV Bharat / videos

ತುಮಕೂರಿನಲ್ಲಿ ಪಂಚರತ್ನ ಯಾತ್ರೆ ಪುನಾರಂಭ: ಹೆಚ್‌ಡಿಕೆಗೆ ಹೂಮಳೆ, ಬೃಹತ್‌ ಸೇಬಿನ ಹಾರ - etv bharat kannada

By

Published : Dec 27, 2022, 7:01 PM IST

Updated : Feb 3, 2023, 8:37 PM IST

ತುಮಕೂರು: ಜಿಲ್ಲೆಯಲ್ಲಿ ಅರ್ಧಕ್ಕೆ ನಿಂತಿದ್ದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಇಂದಿನಿಂದ ಪುನಾರಂಭಗೊಂಡಿದೆ. ತುರುವೇಕೆರೆ ಪಟ್ಟಣದ ಟಿಬಿ ಸರ್ಕಲ್ ಬಳಿ ಯಾತ್ರೆ ಆಗಮಿಸುತ್ತಿದ್ದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಜಯಘೋಷ ಮೊಳಗಿಸಿದರು. ಹೆಚ್​ಡಿಕೆಗೆ ಹೂಮಳೆ ಸುರಿಸಿ, ಹೊಂಬಾಳೆ ಮತ್ತು ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಿದರು. ಜೆಡಿಎಸ್ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹಾಜರಿದ್ದರು. ಇಂದಿನಿಂದ ಜಿಲ್ಲೆಯಲ್ಲಿ ಸಂಚರಿಸಲಿರುವ ಯಾತ್ರೆ ಚಿಕ್ಕನಾಯಕನಹಳ್ಳಿ, ಕುಣಿಗಲ್, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಸಾಗಲಿದೆ.
Last Updated : Feb 3, 2023, 8:37 PM IST

ABOUT THE AUTHOR

...view details