ಕರ್ನಾಟಕ

karnataka

ವ್ಯಕ್ತಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು

ETV Bharat / videos

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ.. ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು - ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

By

Published : Mar 29, 2023, 7:45 PM IST

ಮೈಸೂರು:ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ಆರೋಪಿಗೆ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹುಣಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಂಬಕ್ಕೆ ಕಟ್ಟಿ ಆರೋಪಿಗೆ ಥಳಿಸಿದ ಗ್ರಾಮಸ್ಥರು:ಮಹದೇವ (57) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಎಂಬುದು ತಿಳಿದು ಬಂದಿದೆ. ಮಹದೇವ ಬುದ್ಧಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದಾಗ ಬಾಲಕಿ ಕೂಗಾಡಿದ್ದಾಳೆ. ಕೂಗಾಟದ ಶಬ್ದ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ ಆರೋಪಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ಇದನ್ನೂ ಓದಿ :108 ಕ್ರಿಮಿನಲ್ ಕೇಸ್! ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಣಸೂರು ಠಾಣೆಯ ಪೊಲೀಸರು ಆರೋಪಿ ಮಹದೇವನನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಮಹದೇವ ಅಷ್ಟೊತ್ತಿಗಾಗಲೇ ಅಸ್ವಸ್ಥನಾಗಿದ್ದಾನೆ. ಈ ಹಿನ್ನೆಲೆ ಆತನನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಪ್ರಿಯಕರನ ಜೊತೆ ಸೇರಿ ಪತಿ ಹತ್ಯೆಗೈದ ಪತ್ನಿ: ಪೊಲೀಸ್ ತನಿಖೆಯಿಂದ ಸತ್ಯ ಬಯಲು

ABOUT THE AUTHOR

...view details