ಸಂಸತ್ ಭವನ ನಿರ್ಮಾಣದಲ್ಲಿ ಶ್ರಮಿಸಿದ ಕಾರ್ಮಿಕರಿಗೆ ಸನ್ಮಾನಿಸಿದ ಪ್ರಧಾನಿ ಮೋದಿ: ವಿಡಿಯೋ - ಪ್ರಧಾನಿ ನರೇಂದ್ರ ಮೋದಿ
ನವದೆಹಲಿ:ಇಂದು ನಡೆದ ಹೊಸ ಸಂಸತ್ ಭವನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆ ಗಮನ ಸೆಳೆಯಿತು. ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಕೆಲ ಕಾರ್ಮಿಕರಿಗೆ ಸಂಸತ್ ಲಾಬಿಯಲ್ಲಿ ಗೌರವ ಸಮರ್ಪಣೆ ಮಾಡಲಾಯಿತು. ಶಾಲು ಮತ್ತು ಸ್ಮರಣಿಗೆಯನ್ನು ನೀಡುವ ಮೂಲಕ ಅವರನ್ನು ಸನ್ಮಾನಿಸಿದರು.
ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿರುವ ತ್ರಿಕೋನಾಕಾರದ ಸಂಸತ್ ಕಟ್ಟಡವನ್ನು ಸಾವಿರಾರು ಕಾರ್ಮಿಕರು ಎರಡೂವರೆ ವರ್ಷದಲ್ಲಿ ನಿರ್ಮಾಣ ಮಾಡಿ ಕೊಟ್ಟಿದ್ದಾರೆ. ಇದು ದಾಖಲೆಯೇ ಸರಿ. ಪ್ರಜಾಪ್ರಭುತ್ವದ ದೇಗುಲವೆಂದೇ ಕರೆಯಲಾಗುವ ಸುಂದರ ಮತ್ತು ಭವ್ಯ ಕಟ್ಟಡವನ್ನು ಸುಂದರವಾಗಿ ನಿರ್ಮಿಸಿಕೊಟ್ಟ ಕಾರ್ಮಿಕರನ್ನು ಇಂದಿನ ಉದ್ಘಾಟನಾ ಸಮಾರಂಭದಲ್ಲಿ ಗೌರವಿಸಿರುವುದು ಕಾರ್ಯಕ್ರಮದ ಕಳೆ ಹೆಚ್ಚಿಸಿತು.
ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬೊಬ್ಬ ಕಾರ್ಮಿಕರನ್ನು ನಗುಮೊಗದಿಂದಲೇ ಮಾತನಾಡಿಸುತ್ತಾ ಶಾಲು ಹೊದಿಸಿ, ಸ್ಮರಣಿಕೆ ನೀಡಿದರು. ಇದಾದ ಬಳಿಕ ಅದೇ ಲಾಬಿಯಲ್ಲಿ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ:ಹೊಸ ಸಂಸತ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ, ಸ್ಪೀಕರ್ ಪೀಠದ ಬಳಿ ಸೆಂಗೋಲ್ ಪ್ರತಿಷ್ಠಾಪನೆ