ಕರ್ನಾಟಕ

karnataka

ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ

ETV Bharat / videos

ಗೋಮಾಂಸ ಸಾಗಿಸುತ್ತಿದ್ದವರ ಮೇಲೆ ಹಲ್ಲೆ, 15 ಆರೋಪಿಗಳ ಬಂಧಿಸಿದ ಪೊಲೀಸರು: ನೈತಿಕ ಪೊಲೀಸ್​ಗಿರಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ - ಕಠಿಣ ಕಾನೂನು ಕ್ರಮ

By ETV Bharat Karnataka Team

Published : Sep 25, 2023, 7:49 PM IST

ದೊಡ್ಡಬಳ್ಳಾಪುರ: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದರ ಮೇಲೆ ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಲ್ಲದೆ ಕಾರಿಗೆ ಬೆಂಕಿ ಇಟ್ಟಿರುವ ಆರೋಪ ಕೇಳಿಬಂದಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಆರೋಪಿಗಳನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಭಾನುವಾರ ಮುಂಜಾನೆ 5:45ರ ಸಮಯದಲ್ಲಿ ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದ ಬಳಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದವರ ಮೇಲೆ ಶ್ರೀರಾಮಸೇನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಗೋಮಾಂಸ ಸಾಗಿಸುತ್ತಿದ್ದವರ ಮೇಲೆ ದೊಣ್ಣೆಯಿಂದ ಹಲ್ಲೆ, ಮೊಬೈಲ್ ಕಳವು, ಕಾರಿಗೆ ಬೆಂಕಿ ಕೃತ್ಯಗಳಿಗೆ ಸಂಬಂಧಿಸಿದಂತೆ 15 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ 15 ಆರೋಪಿಗಳಲ್ಲಿ 14 ಆರೋಪಿಗಳು ದೊಡ್ಡಬಳ್ಳಾಪುರ ತಾಲೂಕಿನವರೇ ಆಗಿದ್ದಾರೆ. ಉಳಿದ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಹಿಂದೂಪುರದಿಂದ ಬೆಂಗಳೂರಿನ ಶಿವಾಜಿನಗರಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಮತ್ತು ಹಿಂದೂಪುರ ಮೂಲದ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಗೋಮಾಂಸ ಸಾಗಣೆಗೆ ಬಳಸಿದ 5 ವಾಹನಗಳು ಮತ್ತು ಗೋಮಾಂಸವನ್ನು ಜಪ್ತಿ ಮಾಡಿದ ಪೊಲೀಸರು ಅನಂತರ ಮಣ್ಣಲ್ಲಿ ಹೂತುಹಾಕಿ ನಾಶ ಮಾಡಿದ್ದಾರೆ. ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿಗೆ ಅವಕಾಶ ಇಲ್ಲ, ನೈತಿಕ ಪೊಲೀಸ್​ಗಿರಿ ನಡೆಸಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ:ಆಂಧ್ರದಿಂದ-ಬೆಂಗಳೂರಿಗೆ ಅಕ್ರಮ ಗೋಮಾಂಸ ಸಾಗಾಟ: ವಾಹನಕ್ಕೆ ಬೆಂಕಿ ಇಟ್ಟು ಶ್ರೀರಾಮ ಸೇನೆ ಆಕ್ರೋಶ

ABOUT THE AUTHOR

...view details