ವಿದ್ಯಾರ್ಥಿನಿಯರ ಕುರಿತು ಅವಹೇಳನಕಾರಿ ಪೋಸ್ಟ್: ಹು-ಧಾ ಪೊಲೀಸ್ ಕಮಿಷನರ್ ಹೇಳಿದ್ದೇನು? - Police Commissioner Santosh Babu React
ಹುಬ್ಬಳ್ಳಿ:ನಗರದ ಖಾಸಗಿ ಕಾಲೇಜಿನ ಕೆಲವು ವಿದ್ಯಾರ್ಥಿನಿಯರ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅಸಹ್ಯಕರ ಬರಹ ಬರೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಸಂತೋಷ ಬಾಬು ಪ್ರತಿಕ್ರಿಯೆ ನೀಡಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಡಿಸಿಪಿ ಗೋಪಾಲ ಬ್ಯಾಕೋಡ್ ಹಾಗೂ ವಿದ್ಯಾನಗರ ಠಾಣಾ ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಕಾಲೇಜು ಪ್ರಾಂಶುಪಾಲರು ಮತ್ತು ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಪೊಲೀಸ್ ಕಮಿಷನರ್ ಸಂತೋಷ ಬಾಬು ಪ್ರತಿಕ್ರಿಯೆ: "ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರ ಫೋಟೋಗಳನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ವಿದ್ಯಾರ್ಥಿನಿಯರೇ ದೂರು ಕೊಟ್ಟಿದ್ದಾರೆ. ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ಕೂಡ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಯಾವ ಉದ್ದೇಶದಿಂದ ಈ ಕೃತ್ಯ ಮಾಡಿದ್ದಾರೆ ಅನ್ನೋದು ಸದ್ಯಕ್ಕೆ ತಿಳಿದು ಬಂದಿಲ್ಲ. ಪ್ರಕರಣ ತನಿಖಾ ಹಂತದಲ್ಲಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುತ್ತದೆ" ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ಶಾಲಾ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಖಾಸಗಿ ಶಾಲಾ ಪ್ರಾಂಶುಪಾಲರ ಬಂಧನ