ದೂರದಿಂದಲೇ ನಿಂತು ಗೋಕಾಕ್ ಫಾಲ್ಸ್ ವೀಕ್ಷಣೆಗೆ ಅವಕಾಶ: ಬಿಗಿ ಪೊಲೀಸ್ ಬಂದೋಬಸ್ತ್ - ದೂರದಿಂದಲೇ ನಿಂತು ಗೋಕಾಕ್ ಫಾಲ್ಸ್ ವೀಕ್ಷಣೆಗೆ ಅವಕಾಶ
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಜೋರಾಗಿರುವ ಹಿನ್ನೆಲೆಯಲ್ಲಿ ಭಾರತದ ನಯಾಗರ ಜಲಪಾತ ಎಂದೇ ಖ್ಯಾತಿ ಪಡೆದ ಗೋಕಾಕ್ ಫಾಲ್ಸ್ ತುಂಬಿ ಹರಿಯುತ್ತಿದ್ದು, ಜಲಪಾತ ಧುಮ್ಮಿಕ್ಕಿ ಹರಿಯುತ್ತಿರುವ ನಯನ ಮನೋಹರ ದೃಶ್ಯವನ್ನು ಕಣ್ತುಂಬಿಕೊಳ್ಳಲು ಬೇರೆ ಬೇರೆ ಪ್ರದೇಶಗಳಿಂದ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಗೋಕಾಕ್ ಫಾಲ್ಸ್ನಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಗೋಕಾಕ್ ಫಾಲ್ಸ್ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಬ್ಯಾರಿಕೇಡ್ ಹಾಕಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ದೂರದಿಂದಲೇ ನಿಂತು ಫಾಲ್ಸ್ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಮಾಡಿಕೊಡಲಾಗಿದೆ. ಯುವಕರು ನೀರಿಗೆ ಇಳಿಯುವುದು, ನೀರು ಧುಮ್ಮಿಕ್ಕುವ ಜಾಗಕ್ಕೆ ಇಳಿದು ಬಂಡೆಗಲ್ಲಿನ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಇಲ್ಲಿ ಪ್ರವಾಸಿಗರ ಸುರಕ್ಷತೆಗೆ ಯಾವುದೇ ರೀತಿಯ ವ್ಯವಸ್ಥೆ ಇರಲಿಲ್ಲ. ಇದೀಗ ಮುಂಜಾಗ್ರತಾ ಕ್ರಮವಾಗಿ ಗೋಕಾಕ್ ಡಿವೈಎಸ್ಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಗೋಕಾಕ್ ಜಲಪಾತಕ್ಕೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಇದನ್ನೂ ನೋಡಿ:ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ ಬಳ್ಳಾಲರಾಯನ ದುರ್ಗ ಮತ್ತು ರಾಣಿ ಝರಿ: ವಿಡಿಯೋ