ಆಸ್ಪತ್ರೆಯಲ್ಲಿ ಮಹಿಳೆ ಸಾವು: ಸರ್ಕಾರಿ ವೈದ್ಯರ ನಿರ್ಲಕ್ಷ್ಯ ಆರೋಪ - ಈಟಿವಿ ಭಾರತ ಕನ್ನಡ
ಬಾಗಲಕೋಟೆ :ಹೆರಿಗೆಗೆ ಬಂದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರಿಂದ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಬನಹಟ್ಟಿ ನಗರದ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ರಾಂಪೂರ ಗ್ರಾಮದ ನಿವಾಸಿ ಭಾಗ್ಯಶ್ರೀ ಭಜಂತ್ರಿ (21) ಮೃತ ದುರ್ದೈವಿಯಾಗಿದ್ದು, ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವನ್ನಪ್ಪಿರುವುದಾಗಿ ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ಫೆ.21ರ ಮಧ್ಯಾಹ್ನ ಭಾಗ್ಯ ಅವರನ್ನು ಹೆರಿಗೆ ನೋವಿನ ಬನಹಟ್ಟಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಹೆರಿಗೆ ಬಳಿಕ ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಹೇಳಿದ್ದರು. ನಂತರ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆ ವೈದ್ಯರು ದಾಖಲಿಸಿದ್ದರು.
ತಮಗೆ ತಿಳಿಸದೆ ಖಾಸಗಿ ಆಸ್ಪತ್ರೆಗೆ ಮಗಳನ್ನು ದಾಖಲಿಸಿದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಮೃತ ಮಹಿಳೆಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಮೃತ ಮಹಿಳೆಯ ಪೋಷಕರು ಒತ್ತಾಯಿಸಿದ್ದಾರೆ. ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ :ಇಡೀ ರಾಜ್ಯದ ವ್ಯವಸ್ಥೆ ಹಾಳು ಮಾಡಿದ್ದು ಸಿದ್ದರಾಮಯ್ಯ: ಶೋಭಾ ಕರಂದ್ಲಾಜೆ