ಸಿಎಂ ಪದಗ್ರಹಣಕ್ಕಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ ಶುರು: ವಿಡಿಯೋ - ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ
ಬೆಂಗಳೂರು:ರಾಜ್ಯದ ಮುಂದಿನ ಸಿಎಂ ಯಾರಾಗಲಿದ್ದಾರೆಂಬ ತೀವ್ರ ಸಸ್ಪೆನ್ಸ್ ಮಧ್ಯೆಯೇ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 'ಹೊಸ ಸಿಎಂ ಪ್ರಮಾಣವಚನಕ್ಕೆ' ಸಿದ್ಧತೆ ನಡೆಸಲಾಗುತ್ತಿದೆ. ನಾಳೆಯೇ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವೇದಿಕೆ ಸಿದ್ಧಪಡಿಸಿಲು ಅಗತ್ಯ ಪರಿಕರಗಳನ್ನು ಕ್ರೀಡಾಂಗಣಕ್ಕೆ ತರಲಾಗಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ರಾಜ್ಯದ ಮುಂದಿನ ಸಿಎಂ ಆಗಿ ಸಿದ್ದರಾಮಯ್ಯ ಅವರು ಬಹುತೇಕ ಆಯ್ಕೆಯಾಗಲಿದ್ದಾರೆ ಎಂದು ರಾಜಕೀಯ ಪಡಸಾಲೆಯಲ್ಲಿ ಬಲವಾಗಿ ಕೇಳಿಬರುತ್ತಿದೆ. ಸಿಎಂ ಪ್ರಬಲ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ಇಂದು ಮಾತುಕತೆ ನಡೆಸಿದರು. ಬಳಿಕ ಇಬ್ಬರು ನಾಯಕರು ಅಲ್ಲಿಂದ ತೆರಳಿದ್ದು, ಸಿಎಂ ಯಾರು ಎಂಬ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕರ್ನಾಟಕಕ್ಕೆ ಯಾರು ಸಿಎಂ? ದೆಹಲಿಯಲ್ಲಿ ರಾಹುಲ್ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ