ಅಹಮದಾಬಾದ್ನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ: ವಿಡಿಯೋ - Prime Minister Narendra Modi
ಅಹಮದಾಬಾದ್, ಗುಜರಾತ್: ತವರೂರು ಗುಜರಾತ್ನಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದ ಭಾಗವಾಗಿ ಇಂದು ಅಹಮದಾಬಾದ್ನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. 2 ನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಮೋದಿ ಸಂಚಲನ ಮೂಡಿಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಜನರ ಮಧ್ಯೆ ತೆರೆದ ವಾಹನದಲ್ಲಿ ಪ್ರಧಾನಿ ಕೈಬೀಸುತ್ತಾ ಸಾಗಿದರು. 2ನೇ ಹಂತದ ಮತದಾನ ಡಿಸೆಂಬರ್ 5 ರಂದು ನಡೆಯಲಿದೆ.
Last Updated : Feb 3, 2023, 8:34 PM IST