ಸಕ್ಕರೆ ನಾಡಲ್ಲಿ ಮೋದಿಗೆ ಅಕ್ಕರೆಯ ಸ್ವಾಗತ: ಭರ್ಜರಿ ರೋಡ್ ಶೋ, ಹೂವಿನ ಸುರಿಮಳೆ!- ವಿಡಿಯೋ - narendra modi road show in mandya
ಬೆಂಗಳೂರು/ಮಂಡ್ಯ: ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ, ಧಾರವಾಡದಲ್ಲಿ ರಾಜ್ಯದ ಮೊದಲ ಐಐಟಿ ಕ್ಯಾಂಪಸ್ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಚಾಲನೆಗೆಂದು ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಮಂಡ್ಯದಲ್ಲಿ ಮೋದಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಜನತೆ ಹೂವಿನ ಸುರಿಮಳೆಗೈದರು.
ಮೈಸೂರಿಗೆ ವಾಯುಸೇನೆ ವಿಮಾನದಲ್ಲಿ ಬಂದಿಳಿದ ಪ್ರಧಾನಿ ಆ ಬಳಿಕ ಮಂಡ್ಯಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ಪಿಇಎಸ್ ಕಾಲೇಜು ಬಳಿಯಿಂದ ಐಬಿ ವೃತ್ತದವರೆಗೂ 2 ಕಿಲೋಮೀಟರ್ ರೋಡ್ ಶೋ ನಡೆಸಿದ್ದಾರೆ. ರೋಡ್ ಶೋ ವೀಕ್ಷಿಸಲು ಸುಮಾರು 40 ಸಾವಿರ ಜನ ಸೇರಿದ್ದರು ಎಂದು ಹೇಳಲಾಗಿದೆ.
ರೋಡ್ ಶೋ ನಂತರ ಮದ್ದೂರಿನ ಗೆಜ್ಜಲಗೆರೆಯಲ್ಲಿ ಬಿಜೆಪಿ ಸಮಾವೇಶ ನಡೆಯಲಿದೆ. ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇ ಸೇರಿದಂತೆ ಹಲವು ಕಾಮಗಾರಿಗಳ ಉದ್ಘಾಟನೆಯನ್ನು ಮೋದಿ ನೆರವೇರಿಸಲಿದ್ದಾರೆ.
ಇದನ್ನೂ ಓದಿ:ಇಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ, ಕೇಸರಿ ಮಯವಾದ ಸಕ್ಕರೆ ನಾಡು