'ಷರತ್ತು'ಗಳು ಗ್ಯಾರಂಟಿ- ಸರ್ಕಾರದ ಯೋಜನೆಗಳು ನಿಯಮ, ನಿಬಂಧನೆಗಳಿಗೆ ಒಳಪಟ್ಟಿರುತ್ತವೆ: ಪ್ರಿಯಾಂಕ್ ಖರ್ಗೆ - ಈಟಿವಿ ಭಾರತ ಕನ್ನಡ
ಬೆಂಗಳೂರು:ವಿಧಾನಸಭೆಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿನ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮತದಾರರ ಮುಂದೆ ತೆರೆದಿಟ್ಟಿತ್ತು. ಪಕ್ಷ ಅಧಿಕಾರಕ್ಕೆ ಬಂದ ಮರುಘಳಿಗೆಯಲ್ಲೇ ಈ ಯೋಜನೆಗಳನ್ನು ಜಾರಿಗೆ ತರುವುದಾಗಿಯೂ ಭರವಸೆ ನೀಡಿತ್ತು. ಇದೀಗ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಘೋಷಿತ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತಿದೆ.
ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, "ಕೇಂದ್ರ ಅಥವಾ ರಾಜ್ಯ ಸರ್ಕಾರದ ಪ್ರತಿಯೊಂದು ಯೋಜನೆಯೂ ಕೆಲವು ನಿಯಮ ಮತ್ತು ನಿಬಂಧನೆಗಳನ್ನು ಹೊಂದಿರುತ್ತವೆ" ಎಂದು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು. ಇದೇ ವೇಳೆ ಯೋಜನೆಗಳ ಅನುಷ್ಠಾನಕ್ಕೆ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಎಲ್ಲರಿಗೂ ಉಚಿತ ಎಂಬ ಯಾವುದೇ ಯೋಜನೆ ಇರುವುದಿಲ್ಲ ಎಂದು ಖರ್ಗೆ ಹೇಳಿದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಷರತ್ತುಗಳು ಅನ್ವಯಿಸುತ್ತವೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಂತರ ತಿಳಿಸುವುದಾಗಿ ಹೇಳಿದರು.
ಇದನ್ನೂ ಓದಿ:ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ದ ಅವಹೇಳನಕಾರಿ ಪೋಸ್ಟ್: ದಲಿತ ಮುಖಂಡನ ಬಂಧನ