ಬಂಡವಾಳ ಹೂಡಿಕೆದಾರರ ಸಮಾವೇಶದ ವಿರುದ್ಧ ಪ್ರತಿಭಟನೆ: ಬಡಗಲಪುರ ನಾಗೇಂದ್ರ - ETV Bharat Kannada
ನವೆಂಬರ್ 2 ರಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ವಿರುದ್ಧ ಸಂಯುಕ್ತ ಹೋರಾಟ ಸಮಿತಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ಸಭೆ ನಡೆಸಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಈಟಿವಿ ಭಾರತ್ ಜೊತೆ ಮಾತನಾಡಿದ ಅವರು, ಉದ್ಯೋಗ ಸೃಷ್ಟಿ ನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ಗಳನ್ನು ಕಾರ್ಪೊರೇಟ್ ಕಂಪೆನಿಗೆ ಧಾರೆ ಎರೆಯಲು ಹಾಗೂ ರಾಜ್ಯದ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಕಾರ್ಮಿಕರನ್ನು ಕಾರ್ಪೊರೇಟ್ ಕಂಪೆನಿಗಳ ಗುಲಾಮರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯದ ರೈತರು, ದಲಿತರು, ಕಾರ್ಮಿಕರು, ನಾಗರಿಕರು ಸೇರಿ ಸಂಯುಕ್ತ ಹೋರಾಟ ಸಮಿತಿ ಬೃಹತ್ ಹೋರಾಟ ನಡೆಸಲಿದೆ ಎಂದಿದ್ದಾರೆ.
Last Updated : Feb 3, 2023, 8:30 PM IST