ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ ಎಂದು ಶಿವಮೊಗ್ಗದಲ್ಲಿ ತಮಿಳು ಸೇವಾ ಸಂಘದಿಂದಲೇ ಪ್ರತಿಭಟನೆ - ಈಟಿವಿ ಭಾರತ್ ಕನ್ನಡ ನ್ಯೂಸ್
Published : Sep 26, 2023, 5:04 PM IST
ಶಿವಮೊಗ್ಗ :ಮಂಗಳವಾರ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಬಂದ್ಗೆ ವಿವಿಧ ಸಂಘಟನೆಗಳು ಕರೆ ಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಅದರಂತೆ ಶಿವಮೊಗ್ಗದಲ್ಲಿ ತಮಿಳ್ ಸೇವಾ ಸಂಘ, ತಮಿಳುನಾಡಿಗೆ ನೀರು ನೀಡುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ.
ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಬೀಡಬಾರದು ಇಲ್ಲಿನ ರೈತರೇ ಈ ಬಾರಿ ಮಳೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ನೀರು ಹರಿಯುವುದನ್ನು ತಡೆಯಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ಮತ್ತೊಂದೆಡೆ ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಕಾರ್ಯಕರ್ತರು ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಕಾವೇರಿ ನೀರು ಹರಿಸುವುದನ್ನು ತಡೆಯುವಂತೆ ಸರ್ಕಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರೆ, ಮಾನವ ಹಕ್ಕಗಳ ಹೋರಾಟ ಸಮಿತಿಯ ಕಾರ್ಯಕರ್ತರು ಸಹ ಜಿಲ್ಲಾಧಿಕಾರಿ ಕಚೇರಿ ಎದುರು ಮೌನ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಇದನ್ನೂ ಓದಿ :ರಾಮನಗರದಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ- ವಿಡಿಯೋ