ಕರ್ನಾಟಕ

karnataka

ಹದಗೆಟ್ಟ ಮಡಿಕೇರಿ ನಗರದ ಪ್ರಮುಖ ರಸ್ತೆಗಳು: ಕೈಗೆ, ತಲೆಗೆ ಬ್ಯಾಡೆಂಜ್ ಸುತ್ತಿಕೊಂಡು ಕೊಡಗು ರಕ್ಷಣಾ ವೇದಿಕೆಯಿಂದ ವಿನೂತನ ಪ್ರತಿಭಟನೆ

ETV Bharat / videos

ಹದಗೆಟ್ಟ ಮಡಿಕೇರಿ ನಗರದ ಪ್ರಮುಖ ರಸ್ತೆಗಳು: ಕೈ, ತಲೆಗೆ ಬ್ಯಾಂಡೇಜ್ ಸುತ್ತಿಕೊಂಡು ಕೊಡಗು ರಕ್ಷಣಾ ವೇದಿಕೆಯಿಂದ ವಿನೂತನ ಪ್ರತಿಭಟನೆ - etv bharat kannada

By ETV Bharat Karnataka Team

Published : Oct 3, 2023, 8:00 PM IST

ಕೊಡಗು:ಮಡಿಕೇರಿ ನಗರದ ಪ್ರಮುಖ ರಸ್ತೆಗಳೆಲ್ಲ ಹೊಂಡ ಗುಂಡಿಗಳಿಂದ ಕೂಡಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿವೆ. ನಗರಸಭೆಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರು ಕೂಡ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಇದರಿಂದ ಆಕ್ರೋಶಗೊಂಡ ಕೊಡಗು ರಕ್ಷಣಾ ವೇದಿಕೆ ಮಡಿಕೇರಿಯಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡುವ ಮೂಲಕ ನಗರಸಭೆಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. 

ಕೊಡಗು ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೈಗೆ ಹಾಗೂ ತಲೆಗೆ ಬ್ಯಾಂಡೇಜ್ ಸುತ್ತಿಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಮಡಿಕೇರಿಯ ಗಾಂಧಿ ಮೈದಾನದಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ನಗರ ಸಭೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಳಿಕ ನಗರಸಭೆಗೆ ಮುತ್ತಿಗೆ ಹಾಕಿ ಶೀಘ್ರವಾಗಿ ರಸ್ತೆಗಳನ್ನು ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಆಗ್ರಹಿಸಿದರು.

ಕೊಡಗು ರಕ್ಷಣಾ ವೇದಿಕೆ ಅಧ್ಯಕ್ಷ ಪವನ್ ಪೆಮ್ಮಯ್ಯ ಮಾತನಾಡಿ, ನಗರದ 23 ವಾರ್ಡ್​ಗಳ ರಸ್ತೆಗಳೆಲ್ಲ ಹೊಂಡ -ಗುಂಡಿಗಳಿಂದ ಕೂಡಿದ್ದು, ಶೀಘ್ರವಾಗಿ ದುರಸ್ತಿ ಮಾಡಬೇಕು. ದಸರಾ ಬಂದಾಗ ಮಾತ್ರ ರಸ್ತೆಗಳಿಗೆ ತೇಪೆ ಹಾಕುವ ಕೆಲಸ ಆಗುತ್ತಿದೆ. ದಸರಾ ಮುಗಿಯುವ ಮುನ್ನವೆ ಆ ರಸ್ತೆಗಳೆಲ್ಲ ಮತ್ತೆ ಗುಂಡಿಗಳಾಗುತ್ತವೆ. ಹೀಗಾಗಿ ನಗರಸಭೆಗೆ ಒಂದು ವಾರದ ಗಡುವನ್ನು ನೀಡುತ್ತಿದ್ದೇವೆ. ಅದರ ಒಳಗಾಗಿ ರಸ್ತೆ ಗುಂಡಿಗಳನ್ನು ಮುಚ್ಚಿ ಸುಸಜ್ಜಿತ ರಸ್ತೆ ನಿರ್ಮಾಣ ಮಾಡಬೇಕು. ಇಲ್ಲದಿದ್ದಲ್ಲಿ ಮಡಿಕೇರಿ ನಗರ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಮೈಸೂರು ದಸರಾ: ಅರಮನೆ ಅಂಗಳದಲ್ಲಿ ಫಿರಂಗಿಗಳಿಗೆ ಸಾಂಪ್ರದಾಯಿಕ ಪೂಜೆ

ABOUT THE AUTHOR

...view details