ದೇವನಹಳ್ಳಿ: ಮನೆ ಹಕ್ಕು ಪತ್ರಕ್ಕೆ ಆಗ್ರಹಿಸಿ ಡಿಸಿ ಕಚೇರಿ ಮುಂದೆ ಅಹೋರಾತ್ರಿ ಪ್ರತಿಭಟನೆ - ETV Bharat kannada News
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ):ಮನೆಗಳ ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ದೇವನಹಳ್ಳಿ ತಾಲೂಕಿನ ಚಪ್ಪರದಕಲ್ಲು ಬಳಿಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಲವು ಕುಟುಂಬಸ್ಥರು ಅಹೋರಾತ್ರಿ ಧರಣಿ ನಡೆಸಿದರು. ಧರಣಿ ನಿರತ ಮುರುಗೇಶ್ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಣ್ಣೂರು ಹಳ್ಳಿ ಗ್ರಾಮದ ಸರ್ವೆ ನಂಬರ್ 12ರಲ್ಲಿ ಸುಮಾರು 20 ವರ್ಷದಿಂದ 35ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುತ್ತಿವೆ. 2014ರಲ್ಲಿ 94ಸಿ ಅಡಿಯಲ್ಲಿ ಹಕ್ಕು ಪತ್ರ ವಿತರಿಸಲು ಅರ್ಜಿ ಸಲ್ಲಿಸಿದ್ದೇವೆ. ಇದುವರೆಗೂ ಹಕ್ಕು ಪತ್ರ ವಿತರಣೆ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು.
20 ವರ್ಷಗಳಿಂದ ವಿದ್ಯುತ್, ನೀರು ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯಗಳು ದೊರೆತಿಲ್ಲ. ಅದೆಷ್ಟೋ ಬಾರಿ ಅಧಿಕಾರಿಗಳು ರಾಜಕಾರಣಿಗಳಿಗೆ ಮನವಿ ಮಾಡಿದರೂ ನಮಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಂಡಿಲ್ಲ ಎಂದು ಧರಣಿನಿರತರು ದೂರಿದ್ದಾರೆ. ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ. ಶ್ರೀಮಂತರು ಇನ್ನೂ ಶ್ರೀಮಂತರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿ, ಕೂಡಲೇ ಅಧಿಕಾರಿವರ್ಗ ನಮ್ಮ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.
ಇದನ್ನೂ ಓದಿ :ಲೋಕಾಯುಕ್ತರ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ